ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ 4 ದಿನ ಸತತ ಮಳೆ : ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Share the Article

ದೇಶದ ಈಶಾನ್ಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಕಾರಣ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಎ. 8, 9, 10 ಮತ್ತು 11ರಂದು ಮಳೆ ಬರುವ ಸಾಧ್ಯತೆಯಿದೆ.

ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎ.10ರವರೆಗೆ ಮಳೆಯಾಗಲಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಕೂಡ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave A Reply