ಮಂಗಳೂರು : ಮಟಮಟ ಮಧ್ಯಾಹ್ನ ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಬಸ್ ಮತ್ತು ಬೈಕ್!!!

ಮಂಗಳೂರು : ಅಪಘಾತ ಸಂಭವಿಸಿ ಬೆಂಕಿ ತಗುಲಿದ ಪರಿಣಾಮ ಸಿಟಿ ಬಸ್ ಹಾಗೂ ಬೈಕ್ ಹತ್ತಿ ಉರಿದ ಘಟನೆ ನಗರದ ಹಂಪನಕಟ್ಟೆ ಬಳಿಯ ವೆನ್ಲಾಕ್ ಆಸ್ಪತ್ರೆ ಬಳಿ ಎ.8ರ ಶುಕ್ರವಾರ ಮಧ್ಯಾಹ್ನ ನಡೆದಿದೆ.

 

ಪ್ರಾಥಮಿಕ ಮಾಹಿತಿ ಪ್ರಕಾರ ಬೈಕ್ ಬಂದು ಬಸ್‌ ಡಿಕ್ಕಿ ಹೊಡೆದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಬಸ್ಸು ಹಾಗೂ ಬೈಕ್‌ ಎರಡು ವಾಹನಕ್ಕೂ ಬೆಂಕಿ ತಗುಲಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಇನ್ನು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ವ್ಯಾಪಿಸುವುದನ್ನು ತಡೆದಿದ್ದು, ಖಾಸಗಿ ಬಸ್ ಬಹುಪಾಲು ಸುಟ್ಟು ಹೋಗಿದೆ. ಬೈಕ್ ಸಂಪೂರ್ಣವಾಗಿ ಸುಟ್ಟು ಹೋಗಿರುವುದಾಗಿ ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave A Reply

Your email address will not be published.