ಮಂಗಳೂರು : ಕಲ್ಲಡ್ಕ ಪ್ರಭಾಕರ ಭಟ್‌ಗೆ ಸೋಮವಾರ ಶಸ್ತ್ರಚಿಕಿತ್ಸೆ ಸಾಧ್ಯತೆ!!!

ಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್‌ಎಸ್‌ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಆರೋಗ್ಯ ಶುಕ್ರವಾರವೂ ಸ್ಥಿರವಾಗಿದೆ. ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಯ ಹಿನ್ನೆಲೆ ಬೈಪಾಸ್ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ಪ್ರಭಾಕರ್ ಭಟ್ ಅವರನ್ನು ಬೆಂಗಳೂರಿಗೆ ಕರೆತರುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಈಗಾಗಲೇ ಸೂಚಿಸಿದ್ದಾರೆ ಎಂಬ ಮಾಹಿತಿ ಇದೆ. ಮೂಲಗಳ ಪ್ರಕಾರ, ಮಂಗಳೂರಿನಲ್ಲೇ ಶಸ್ತ್ರಚಿತ್ಸೆಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ.


Ad Widget

Ad Widget

Ad Widget

ಏ.11ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬೈಪಾಸ್ ಸರ್ಜರಿ ನಡೆಸುವ ಸಂಭವ ಇದೆ. ಪ್ರಸಕ್ತ ಆಸ್ಪತ್ರೆಯ ವಿಶೇಷ ನಿಗಾ ಘಟಕದಲ್ಲಿ ಇರುವುದರಿಂದ ಅವರ ಭೇಟಿಗೆ ಯಾರಿಗೂ ಅವಕಾಶ ನೀಡಲಾಗಿಲ್ಲ.

Leave a Reply

error: Content is protected !!
Scroll to Top
%d bloggers like this: