ಕನುಸಗಾರನಿಗೆ ದೊರೆತ ಗೌರವ ಡಾಕ್ಟರೇಟ್

ಕ್ರೇಜಿಸ್ಟಾರ್ ರವಿಚಂದ್ರನ್ ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಸಾಕಷ್ಟು ವರ್ಷಗಳಿಂದ ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. ಪ್ರೇಮ ಲೋಕವನ್ನೇ ನಿರ್ಮಿಸಿದ ಕನಸಿನ ಸಾಹುಕಾರರಾದ ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ದೊರಕಿದೆ

ಬೆಂಗಳೂರು ನಗರ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ‌ ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ.

ಚಲನಚಿತ್ರ ರಂಗದಲ್ಲಿನ ಸೇವೆ ಪರಿಗಣಿಸಿ ನಟ ರವಿಚಂದ್ರನ್ ಅವರಿಗೆ ಬೆಂಗಳೂರು ನಗರ ವಿವಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದೆ. ಸಮಾಜ ಕ್ಷೇತ್ರದ ಅನುಪಮ ಸೇವೆಗಾಗಿ ರಂ.ಆರ್. ಜೈಶಂಕರ್, ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ಡಾ.ಸತ್ಯನಾರಾಯಣ ಅವರಿಗೆ ಗೌರವ ಡಾಕ್ಟರೇಟ್ ದೊರೆತಿದೆ.

ಬೆಂಗಳೂರು ನಗರ ವಿವಿಯ ಮೊದಲ ವರ್ಷದ ಘಟಿಕೋತ್ಸವ ಏಪ್ರಿಲ್ 11 ರಂದು ನಡೆಯಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ವಹಿಸಲಿದ್ದಾರೆ. ಈ ಕಾರ್ಯಕ್ರಮ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೊತಿ ಆಡಿಟೋರಿಯಂ ನಲ್ಲಿ ನಡೆಯಲಿದೆ. 

Leave A Reply

Your email address will not be published.