ಪ್ರಿಯತಮ ಪ್ರೀತಿ ನಿರಾಕರಿಸಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಪ್ರೇಯಸಿ ಹಾಗೂ ಆಕೆಯ ಸ್ನೇಹಿತರು!!|ಆಕೆಯ ಪ್ರೇಮ ವೈಫಲ್ಯಕ್ಕೆ ಗೆಳತಿಯರ ಈ ನಿರ್ಧಾರದ ಕಾರಣ ನಿಗೂಢ

ಪ್ರೀತಿ ಮಾಡಿದವ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಕ್ಕೇ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿದ್ದಲ್ಲದೆ, ಆಕೆಯ ಇತರ ಐದು ಸ್ನೇಹಿತರು ಕೂಡ ವಿಷ ಸೇವಿಸಿರುವ ಆಶ್ಚರ್ಯಕರ ಘಟನೆ ನಡೆದಿದೆ.

ಈ ಘಟನೆ ಬಿಹಾರದ ಔರಂಗಾಬಾದ್‌ನಲ್ಲಿ ನಡೆದಿದ್ದು,ಐವರಲ್ಲಿ ಮೂವರು ಸಾವನ್ನಪ್ಪಿದ್ದು,ಮೂವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ಎಲ್ಲರ ವಯಸ್ಸು ಸುಮಾರಿ 12ರಿಂದ 16 ಇರಬಹುದು ಎಂದು ಅಂದಾಜು ಮಾಡಲಾಗಿದ್ದು,ಪ್ರೀತಿ ಮಾಡಿದವ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ.


Ad Widget

Ad Widget

Ad Widget

ಘಟನೆಯ ವಿವರ:
ಬಾಲಕಿ ತನ್ನ ಸೋದರ ಮಾವನನ್ನು ಪ್ರೀತಿಸುತ್ತಿದ್ದಳು ಎಂದು ಔರಂಗಾಬಾದ್ ಎಸ್ಪಿ ಕಾಂತೇಶ್ ಕುಮಾರ್ ಮಿಶ್ರಾ ಹೇಳಿದ್ದಾರೆ.ಆಕೆ ಮತ್ತು ಐವರು ಸ್ನೇಹಿತರು ಸೇರಿ ಹುಡುಗನ ಬಳಿ ಹೋಗಿ ಮದುವೆ ವಿಚಾರ ತಿಳಿಸಿದ್ದಾರೆ. ಆದರೆ ಈ ಪ್ರಸ್ತಾವನೆಯನ್ನು ಆತ ತಿರಸ್ಕರಿಸಿರುವುದಾಗಿ ಬಹಿರಂಗಪಡಿಸಿದ್ದಾರೆ.ಹುಡುಗನ ನಿರಾಕರಣೆಯಿಂದ ಹುಡುಗಿ ತೀವ್ರ ಖಿನ್ನತೆಗೆ ಒಳಗಾಗಿ ವಿಷಕಾರಿ ಪದಾರ್ಥವನ್ನು ಸೇವಿಸಿದ್ದಾಳೆ ಎನ್ನಲಾಗುತ್ತಿದೆ.ಅದೇ ವೇಳೆ ಉಳಿದವರೂ ಕೂಡ ವಿಷ ತೆಗೆದುಕೊಂಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಅವರನ್ನು ಔರಂಗಾಬಾದ್‌ನ ಸದರ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಅಷ್ಟರಲ್ಲಾಗಲೇ ಮೂವರು ಮೃತಪಟ್ಟಿದ್ದರು.ಉಳಿದ ಮೂವರ ಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಗಯಾದ ಮಗಧ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ.ಆದರೆ ಉಳಿದ ಐವರು ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಗೊತ್ತಾಗಿಲ್ಲ,ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
Scroll to Top
%d bloggers like this: