ರಾಮನವಮಿ ಹಬ್ಬದ ಮಹತ್ವ ; ಇತಿಹಾಸ ಇಲ್ಲಿದೆ

ಮಹಾವಿಷ್ಣುವಿನ ಏಳನೆಯ ಅವತಾರವಾದ ಶ್ರೀರಾಮನು ಜನಿಸಿದ ನವಮಿ ದಿನ ಶ್ರೀ ರಾಮ ನವಮಿ ಹಬ್ಬ ಆಚರಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ ಶ್ರೀ ರಾಮ ನವಮಿ ಎಂದರೆ ಹಬ್ಬದ ಸಂಭ್ರಮ ಚೈತ್ರ ಮಾಸದ ಒಂಭತ್ತನೇ ದಿನ, ಅಂದರೆ ವರ್ಷದ ಮೊದಲ ತಿಂಗಳಿನಲ್ಲಿ ಬರುವ ಹಬ್ಬ.

ಶ್ರೀ ರಾಮನು ಜನಿಸಿದ ದಿನವೆಂದು ಆಚರಿಸಲಾಗುವ ಹಬ್ಬ ರಾಮನವಮಿ. ಹಿಂದೂ ಗ್ರಂಥಗಳಲ್ಲಿ ಉಲ್ಲೇಖವಿರುವಂತೆ ನಾಲ್ಕು ಯುಗಗಳಲ್ಲಿ ಒಂದಾದ ತ್ರೇತಾಯುಗದಲ್ಲಿ ರಾಮನು ಜನಿಸಿದನು. ಈ ದಿನ ಶ್ರೀರಾಮನನ್ನು ಪೂಜಿಸಿದರೆ ಕೆಟ್ಟ ಶಕ್ತಿಗಳು ನಿವಾರಣೆಯಾಗಿ, ಭೂಮಿಯ ಮೇಲೆ ದೈವೀಕ ಶಕ್ತಿಯು ನೆಲೆಸುತ್ತದೆ ಎಂಬ ನಂಬಿಕೆ.

ರಾಮ ಎನ್ನುವ ಎರಡು ಅಕ್ಷರದಲ್ಲಿ ಮಹತ್ವಪೂರ್ಣವಾದ ಅರ್ಥವಿದೆ ‘ರಾ’ ಎಂದರೆ ಬೆಳಕು ‘ಮ’ ಎಂದರೆ ಒಳಗೆ. ಅಂದರೆ ನಿಮ್ಮೊಳಗಿನ ದೈವಿಕ ಬೆಳಕು ರಾಮ.

Leave A Reply

Your email address will not be published.