ಮುಸ್ಲಿಂ ವ್ಯಾಪಾರಿ ಮೇಲೆ ದೌರ್ಜನ್ಯ ಪ್ರಕರಣ- ಶ್ರೀರಾಮಸೇನೆ ಕಾರ್ಯಕರ್ತ ಅರೆಸ್ಟ್!!!

0 15

ಮುಸ್ಲಿಂ ವ್ಯಾಪಾರಸ್ಥರಿಗೆ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬಾರದು ಎಂದು ಆಗ್ರಹಿಸಿದ್ದ ಹಿಂದೂಪರ ಸಂಘಟನೆ ಕಾರ್ಯಕರ್ತರು ಏಕಾಏಕಿ ಕೆಲ ಮುಸ್ಲಿಂ ಅಂಗಡಿಗಳ ಮೇಲೆ ದಾಳಿ ನಡೆಸಿ, ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿ ಅಂಗಡಿ ತೆರವು ಮಾಡಿದ ಆರೋಪ ಕೇಳಿಬಂದಿತ್ತು.

ಧಾರವಾಡದ ಪ್ರತಿಷ್ಠಿತ ನುಗ್ಗಿಕೇರಿ ದೇವಸ್ಥಾನದ ಆವರಣದಲ್ಲಿ ಈ ಘಟನೆ ನಡೆದಿತ್ತು.

ಪ್ರಕರಣ ಸಂಬಂಧ ಇದೀಗ ಓರ್ವ ಶ್ರೀರಾಮಸೇನೆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಹಾಲಿಂಗ ಐಗಳಿ ಎಂದು ಗುರುತಿಸಲಾಗಿ ವ್ಯಾಪಾರಿ ನಬಿಸಾಬ್ ನೀಡಿದ ದೂರಿನ ಮೇರೆಗೆ ಧಾರವಾಡ ಗ್ರಾಮೀಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಧಾರವಾಡ ನುಗ್ಗಿಕೇರಿಯ ಹನುಮಂತ ಕಳೆದ 15 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದ ನಬಿಸಾಬ್ ಎಂಬುವರಿಗೆ ಸೇರಿದ ಅಂಗಡಿ ಮೇಲೆ ದಾಳಿ ಮಾಡಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಅವರ ಅಂಗಡಿಯಲ್ಲಿದ್ದ ಕಲ್ಲಂಗಡಿ ಹಣ್ಣುಗಳನ್ನು ಒಡೆದು ಹಾಕಿದ್ದರು.

Leave A Reply