ಉಡುಪಿ ಅಂಗನವಾಡಿ ಕೇಂದ್ರದಲ್ಲಿ ಸರಕಾರಿ ಹುದ್ದೆ| 4th, 10th ಪಾಸಾದವರು ಅರ್ಜಿ ಸಲ್ಲಿಸಿ| ಅರ್ಜಿ ಸಲ್ಲಿಸಲು ಮೇ.02 ಕೊನೆಯ ದಿನ!

ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಅಭಿವೃದ್ಧಿ ಯೋಜನೆ ವ್ಯಾಪ್ತಿಗೆ ಒಳಪಟ್ಟ ಅಂಗನವಾಡಿ ಕೇಂದ್ರಗಳಲ್ಲಿ 2 ಅಂಗನವಾಡಿ ಕಾರ್ಯಕರ್ತೆ, ಹಾಗೂ 35 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಮೇ 2 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 08-04-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02-05-2022

ಶೈಕ್ಷಣಿಕ ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 10ನೇ ತರಗತಿ (ಅಂಗನವಾಡಿ ಕಾರ್ಯಕರ್ತೆ), ಕನಿಷ್ಟ 4ನೇ ತರಗತಿ (ಅಂಗನವಾಡಿ ಸಹಾಯಕಿ) ಉತ್ತೀರ್ಣರಾಗಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷದೊಳಗಿನವರಾಗಿರಬೇಕು. ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ, ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.