ಮಂಗಳೂರು : BMW ಕಾರು ಸರಣಿ ಅಪಘಾತ ಪ್ರಕರಣ : ಆರೋಪಿಗೆ ನ್ಯಾಯಾಂಗ ಬಂಧನ

Share the Article

ಮಂಗಳೂರು : ಶನಿವಾರ ಬಲ್ಲಾಳ್ ಬಾಗ್ ನಲ್ಲಿ ಮಧ್ಯಾಹ್ನ ನಡೆದ ಸರಣಿ ಅಪಘಾತಕ್ಕೆ ಸಂಬಂಧಿಸಿದಂತೆ, ಆರೋಪಿ ಕಾರಿನ ಚಾಲಕ ಶ್ರವಣ್ ಕುಮಾರ್ ನನ್ನು ಸಂಚಾರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಎ.12 ರವರೆಗರ ಕಸ್ಟಡಿ ನೀಡಲಾಗಿದೆ.

ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಪ್ರಕಾರ 308, 279, 337, 338 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಆರೋಪಿಯು ಗಂಭೀರವಾದ ನಿರ್ಲಕ್ಷ್ಯ ತೋರಿಸಿರುವುದರಿಂದ ಕಾನೂನು ತಜ್ಞರ ಸಲಹೆ ಪಡೆದು ಆರೋಪಿ ವಿರುದ್ಧ ಅಪರೂಪವೆಂಬಂತೆ ಕಲಂ 308 ರ ಅನ್ವತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಆರೋಪಿ ಮದ್ಯ ಅಥವಾ ಡ್ರಗ್ಸ್ ಸೇವನೆ ಮಾಡಿದ್ದಾನೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲು ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಶ್ರವಣ್ ಕುಮಾರ್ ಚಲಾಯಿಸುತ್ತಿದ್ದ ಬಿಎಂಡಬ್ಲ್ಯು ಕಾರಿನ ದಾಖಲೆಗಳು ಸಮರ್ಪಕವಾಗಿಲ್ಲ, ದಾಖಲೆಯ ಬಗ್ಗೆ ಕೆಲವು ಗೊಂದಲಗಳಿವೆ. ದಾಖಲೆಗಳು ಆತನ ಹೆಸರಿಗೆ ವರ್ಗಾವಣೆ ಆಗಿರಲಿಲ್ಲ ಎಂಬ ಮಾಹಿತಿ ಇದೆ.

ಈ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಾರು ಡಿಕ್ಕಿಯಾಗಿ‌ ಗಂಭೀರವಾಗಿ ಗಾಯಗೊಂಡಿದ್ದ ಕರಂಗಲ್ಪಾಡಿಯ ಪ್ರೀತಿ ಮನೋಜ್(47)ರ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave A Reply