ಇಸ್ಲಾಂ ಧರ್ಮಕ್ಕೆ ಬಲವಂತವಾಗಿ ಮತಾಂತರ ಮಾಡಿದ ವೈದ್ಯ !! | ಡಾಕ್ಟರ್ ವಿರುದ್ಧ ದೂರು ದಾಖಲಿಸಿದ ಯುವಕ

ಇತ್ತೀಚೆಗೆ ದೇಶದಲ್ಲಿ ಮತಾಂತರ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಅಂತೆಯೇ ವೈದ್ಯನೊಬ್ಬ ತನ್ನ ಸಹೋದ್ಯೋಗಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

 

ಇಟ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ರಾಮರಾಜ್ ಯಾದವ್ ಎಂಬ ಯುವಕ ತಾನು ಖಾಸಗಿ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದೆ, ಅಲ್ಲಿನ ವೈದ್ಯ ಡಾ ಫಾರೂಕಿ ಕಮಲ್ 2019 ರಲ್ಲಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದರು ಮತ್ತು ಅವರು ಕುರಾನ್‌ನನ್ನು ಪಠಿಸುವಂತೆ ಮಾಡಿದ್ದರು. ಬಳಿಕ ನನ್ನ ಆಧಾರ್ ಕಾರ್ಡನ್ನು ಕರಮ್ ಹುಸೇನ್ ಹೆಸರಿನಲ್ಲಿ ಬದಲು ಮಾಡಲಾಗಿದೆ. ಅದಲ್ಲದೆ, ತಾನು ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸರನ್ನು ಭೇಟಿ ಮಾಡಲು ಪ್ರಯತ್ನಿಸಿದೆ, ಆದರೆ ನ್ಯಾಯವನ್ನು ಪಡೆಯಲು ವಿಫಲವಾಗಿದ್ದೇನೆ ಎಂದು ಆರೋಪಿಸಿದ್ದಾನೆ.

ಯಾದವ್ ಅವರ ದೂರಿನ ಮೇರೆಗೆ, ವೈದ್ಯ ಮತ್ತು ಇತರ ಇಬ್ಬರು ವ್ಯಕ್ತಿಗಳ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಕಾನೂನು ಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿ ಹಾಗೂ ವಂಚನೆಗಾಗಿ ಪ್ರಕರಣ ದಾಖಲಿಸಿದ್ದಾರೆ.

Leave A Reply

Your email address will not be published.