ಮೋದಿ ತವರೂರಲ್ಲಿ ರಾಸಾಯನಿಕ ಕಾರ್ಖಾನೆ ಸ್ಪೋಟ !! | ಭೀಕರ ದುರಂತದಲ್ಲಿ ಆರು ಮಂದಿ ಕಾರ್ಮಿಕರು ದುರಂತ ಸಾವು

ರಾಸಾಯನಿಕ ಕಾರ್ಖಾನೆಯೊಂದು ಮುಂಜಾನೆ ವೇಳೆ ಸ್ಫೋಟಗೊಂಡಿದ್ದು, 6 ಮಂದಿ ಕಾರ್ಮಿಕರು ಮೃತಪಟ್ಟಿರುವ ದುರಂತ ಘಟನೆ ಪ್ರಧಾನಿ ನರೇಂದ್ರ ಮೋದಿ ತವರೂರು ಗುಜರಾತ್‌ನ ಭರೂಚ್ ಜಿಲ್ಲೆಯಲ್ಲಿ ನಡೆದಿದೆ.

ಅಹಮದಾಬಾದ್‌ನಿಂದ 235 ಕಿಮೀ ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದ ಘಟಕದಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ ವೇಳೆ ದ್ರಾವಕ ಭಟ್ಟಿ ಇಳಿಸುವ ಪ್ರಕ್ರಿಯೆಯಲ್ಲಿ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ ಎಂದು ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಾಗಾಗಿ ಅಲ್ಲೇ ಇದ್ದ 6 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ನಂತರ ಬೆಂಕಿಯನ್ನು ನಿಯಂತ್ರಿಸಿ, ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದರ ಹೊರತಾಗಿ ಯಾರೂ ಗಾಯಗೊಂಡಿಲ್ಲ ಎಂದು ಮಾಹಿತಿ ನೀಡಿದ್ದಾರೆ.

Leave A Reply

Your email address will not be published.