ಪಾಕಿಸ್ತಾನದ ನೂತನ ಪ್ರಧಾನಿ ಆಯ್ಕೆ ; ಇಲ್ಲಿದೆ ಪೂರ್ಣ ಮಾಹಿತಿ
ಪಾಕಿಸ್ತಾನದ ಹೊಸ ಪ್ರಧಾನಿ ಆಯ್ಕೆಗೆ ಮುಂಚಿತವಾಗಿ, ಮಾಜಿ ಪ್ರಧಾನಿ ಇಮ್ರಾನ್ ಖಾನ್ ರಾಷ್ಟ್ರೀಯ ಅಸೆಂಬ್ಲಿಯ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದರು. ‘ಕಳ್ಳರೊಂದಿಗೆ’ ಸಭೆಗಳಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ನಾಯಕ ಕಾಮೆಂಟ್ ಮಾಡಿದ ನಂತರ ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶೆಹಬಾಜ್ ಶರೀಫ್ ಆಯ್ಕೆಯಾಗಿದ್ದಾರೆ.
ಶನಿವಾರ ಅವಿಶ್ವಾಸ ಮತದಿಂದ ಪದಚ್ಯುತಗೊಂಡ ಇಮ್ರಾನ್ ಖಾನ್ ಅವರ ಉತ್ತರಾಧಿಕಾರಿಯಾಗಿ ಶೆಹಬಾಜ್ ಷರೀಫ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಾಕ್ ಪ್ರಧಾನಿ ಆಯ್ಕೆ ಪ್ರಕ್ರಿಯೆ ರವಿವಾರ ಆರಂಭಗೊಂಡಿತ್ತು. ಇಂದು ರಾತ್ರಿ ನೂತನ ಪ್ರಧಾನಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಶಹಬಾಜ್ ಶರೀಫ್ ಅವರು ಆಗಸ್ಟ್ 2018 ರಿಂದ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರು. ಅವರು ಮೂರು ಬಾರಿ ಪಂಜಾಬ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಹಾಗು ಅವರು 1997ರಲ್ಲಿ ಪಂಜಾಬ್ʼನ ಮುಖ್ಯಮಂತ್ರಿಯಾಗಿದ್ದರು.