ಟೆಂಪೋ ಮತ್ತು ಸ್ಕೂಟರ್ ನಡುವೆ ಡಿಕ್ಕಿ|ಭೀಕರ ಅಪಘಾತದಲ್ಲಿ ದೈವ ನರ್ತಕ ಮೃತ್ಯು

Share the Article

ಕಾರ್ಕಳ: ಟೆಂಪೋ ಮತ್ತು ಸ್ಕೂಟರ್ ಡಿಕ್ಕಿಯಾಗಿ ನಡೆದ ಅಪಘಾತದಲ್ಲಿ ದೈವ ನರ್ತಕರು ಸಾವನ್ನಪ್ಪಿದ ಘಟನೆ ತಾಲೂಕಿನ ಮುಂಡೂರು ಗ್ರಾಮದ ಜಾರಿಗೆಕಟ್ಟೆ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದ ಸಚೇರಿಪೇಟೆಯ ನಿವಾಸಿ ದೈವ ನರ್ತಕ ಗೋಪಾಲಕೃಷ್ಣ (38)ಎಂಬುವವರೆಂದು ಗುರುತಿಸಲಾಗಿದೆ.

ಮುಂಡೂರು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿದ್ದ ತರಕಾರಿ ಸಾಗಾಟದ ಟೆಂಪೊವೊಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅದರ ಪರಿಣಾಮ ಸ್ಕೂಟರ್ ಸವಾರ ಗೋಪಾಲಕೃಷ್ಣ ರಸ್ತೆಗೆ ಎಸೆಯಲ್ಪಟ್ಟು, ಗಂಭೀರ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಕಿನ್ನಿಗೋಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಿತಾದರೂ,ಗಾಯಾಳುವನ್ನು ಪರೀಕ್ಷಿಸಿದ
ವೈದ್ಯರು ಗಾಯಾಳು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಈ
ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.

Leave A Reply