KGF Chapter 2 ಸಿನಿಮಾ ಬಿಡುಗಡೆಗೆ ತಡೆ ಕೋರಿ ಕೋರ್ಟ್‌ನಲ್ಲಿ ದಾವೆ ಸಲ್ಲಿಕೆ!!!

ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೆಜಿಎಫ್ 2 ಗೆ ಬಿಡುಗಡೆ ತಡೆ ಕೋರಿ ಕೋರ್ಟಿನಲ್ಲಿ ದಾವೆ ಸಲ್ಲಿಸಲಾಗಿದೆ.

ಕೆಜಿಎಫ್ ಸಿನಿಮಾಗೆ ಸಾಮಾಜಿಕ ಬದ್ಧತೆ ಇಲ್ಲ. ಕೇವಲ ಚಾಕು ಚೂರಿ ಸಂಸ್ಕೃತಿ ತೋರಿಸಿದ್ದಾರೆ. ಕ್ರೌರ್ಯವನ್ನು ಮೆರೆಸಿದ್ದಾರೆ. ಇಂತಹ ಸಿನಿಮಾಗಳ ಬಿಡುಗಡೆಯಿಂದ ಸಾಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಚಿತ್ರದಲ್ಲಿರುವ ಕ್ರೌರ್ಯ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೆನ್ಸಾರ್ ಬೋರ್ಡ್‌ಗೆ ದೂರು ಸಲ್ಲಿಸಿದ್ದೆವು. ನಮ್ಮ ಮನವಿ ಅಂಗೀಕರಿಸಿಲ್ಲ. ಬದಲಿಗೆ ಕ್ರೌರ್ಯ ಇರುವ ಸಿನಿಮಾಗೆ ಯುಎ ಸರ್ಟಿಫಿಕೇಟ್ ನೀಡಿ ಬಿಡುಗಡೆಗೆ ಅನುಮತಿ ನೀಡಿದೆ. ಚಲನ ಚಿತ್ರ ವಾಣಿಜ್ಯ ಮಂಡಳಿಗೆ ದೂರು ಕೊಟ್ಟರೂ ಪ್ರಯೋಜನ ಆಗಿಲ್ಲ. ಹೀಗಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ. ನಾಳೆ ನಮ್ಮ ಅರ್ಜಿಯ ವಿಚಾರಣೆ ಇದೆ ಎಂದು ಅರ್ಜಿದಾರ ಅಶೋಕ್ ಕುಮಾರ್ ತಿಳಿಸಿದ್ದಾರೆ.


Ad Widget

Ad Widget

Ad Widget

‘ಕ್ರೌರ್ಯವನ್ನು ಸಿನಿಮಾದಲ್ಲಿ ವಿಜೃಂಭಣೆ ಮಾಡಿರುವುದಕ್ಕೆ ನಮ್ಮ ತಕರಾರಿದೆ. ನ್ಯಾಯಾಲಯದ ಮೊರೆ ಹೋಗಿದ್ದೇವೆ. ನ್ಯಾಯಾಲಯದಲ್ಲಿ ಈ ಸಿನಿಮಾಗೆ ತಡೆ ಸಿಗುತ್ತದೆ ಎಂಬ ಭರವಸೆ ಇದೆ’ ಎಂದು ಅವರು ತಿಳಿಸಿದ್ದಾರೆ.

ಕೆಜಿಎಫ್ ಸಿನಿಮಾಗೆ ತಡೆ ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ ನಿರ್ಮಾಪಕ ವಿಜಯ್ ಕಿರಗುಂದೂರು ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಅವರನ್ನು ಎದುರುದಾರರನ್ನಾಗಿ ಉಲ್ಲೇಖಿಸಲಾಗಿದೆ.

Leave a Reply

error: Content is protected !!
Scroll to Top
%d bloggers like this: