ಮಂಗಳೂರು-ಮೂಡಬಿದ್ರೆ ರಾಜ್ಯ ಹೆದ್ದಾರಿಯ ಗಂಜಿಮಠ ಸಮೀಪ ಪ್ರಯಾಣಿಕರನ್ನು ಹೊತ್ತು ಬರುತಿದ್ದ ಖಾಸಗಿ ಬಸ್ಸು ಪಲ್ಟಿಯಾದ ಘಟನೆ ಏಪ್ರಿಲ್ 13ರಂದು ನಡೆದಿದೆ.
ಸಂಜೆ ವೇಳೆಗೆ ಸುರಿದ ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ ಎನ್ನಲಾಗಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು,ಸ್ಥಳಕ್ಕೆ ಬಜ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
