ಪ್ರಚೋದನಕಾರಿ ಭಾಷಣಕಾರ ಶ್ರೀರಾಮ ಸೇನಾ ಮುಖ್ಯಸ್ಥ ಮುತಾಲಿಕ್ ಉಡುಪಿ ಪ್ರವೇಶಕ್ಕೆ ನಿರ್ಬಂಧ!! ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತದ ಆದೇಶ

Share the Article

ಉಡುಪಿ : ಎ.15 ರಂದು‌‌ ಗಂಗೊಳ್ಳಿಯಲ್ಲಿ ನಡೆಯಲಿರುವ ವೀರೇಶ್ವರ ದೇವಾಸ್ಥಾನದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಪ್ರಮೋದ್ ಮುತಾಲಿಕ್ ಅವರಿಗೆ ಉಡುಪಿ ಜಿಲ್ಲೆ ಪ್ರವೇಶ ಮಾಡದಂತೆ ನಿರ್ಬಂಧ ಹೇರಲಾಗಿದೆ.

ಈ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಎ.15 ರಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಆಗಮನದ ಪ್ರವೇಶವನ್ನು ಉಡುಪಿ ಜಿಲ್ಲಾದ್ಯಂತ ನಿರ್ಭಂಧಿಸಿ ಸಿ.ಆರ್.ಪಿ.ಸಿ ಸೆಕ್ಷನ್ 133, 143 ಮತ್ತು 144 ರನ್ವಯ
ನಿಷೇದಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.

Leave A Reply