ದೇವಸ್ಥಾನದ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 28 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Share the Article

ದೇವಸ್ಥಾನವೊಂದರ ಜಾತ್ರೆಯಲ್ಲಿ ಪ್ರಸಾದ ಸೇವಿಸಿ ಮಕ್ಕಳು ಸೇರಿದಂತೆ ಸುಮಾರು 28 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಚಂಡೀಗಢದ ಫರೂಖ್‍ನಗರ ಸಮೀಪದ ಮುಬರಿಕ್‍ಪುರದಲ್ಲಿ ನಡೆದಿದೆ.

ಮಂಗಳವಾರ ರಾತ್ರಿ ಜಾತ್ರೆಗೆ ಬಂದಿದ್ದ ಜನರಿಗೆ ಜ್ಯೂಸ್ ನೀಡಲಾಗಿತ್ತು. ಜ್ಯೂಸ್ ಕುಡಿದ ನಂತರ 8 ರಿಂದ 10 ಮಕ್ಕಳು ಸೇರಿದಂತೆ 28 ಮಂದಿ ಅಸ್ವಸ್ಥರಾಗಿದ್ದಾರೆ. ನಂತರ ಅವರನ್ನು ಕೂಡಲೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇದೀಗ ಅಸ್ವಸ್ಥಗೊಂಡವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಎಲ್ಲರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಈ ಸಂಬಂಧ ಇದೀಗ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Leave A Reply