ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಬಿಗಿ ಭದ್ರತೆ!!

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಆರೋಪ ಹೊತ್ತುಕೊಂಡಿರುವ ಹಿನ್ನೆಲೆಯಲ್ಲಿ ಪಟ್ಟಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ನಾಯಕರ ಮನೆಗೆ ಭದ್ರತೆ ಒದಗಿಸಲಾಗಿದೆ.

ಸಾವಿನ ಸುದ್ದಿ ದೆಹಲಿಯಲ್ಲೂ ಸಂಚಲನ ಸೃಷ್ಟಿಸಿದ್ದು, ಈ ಹಿನ್ನೆಲೆಯಲ್ಲಿ ಸಚಿವ ರಾಜೀನಾಮೆ ಪಡೆಯಬೇಕೋ-ಬೇಡವೋ ಎನ್ನುವ ಬಗ್ಗೆ ಬಿಜೆಪಿ ಚಿಂತನೆ ನಡೆಸುತ್ತಿದೆ.ಇತ್ತ ಯುವ ಕಾಂಗ್ರೆಸ್ ವತಿಯಿಂದ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದು, ಪಾದಯಾತ್ರೆ ಮೂಲಕ ಸಾಗಿ ಬರುವ ಪ್ರತಿಭಟನಾಕಾರರು ಸಿ.ಎಂ ಬೊಮ್ಮಾಯಿ ಮನೆಗೂ ಮುತ್ತಿಗೆ ಹಾಕಲು ನಿರ್ಧಾರಿಸಿದ್ದಾರೆ ಎನ್ನುವ ಸುದ್ದಿಯ ಬೆನ್ನಲೇ ಬೊಮ್ಮಾಯಿ ಮನೆಗೆ ಬಿಗಿ ಭದ್ರತೆ ಒದಗಿಸಲಾಗಿದೆ.

Leave A Reply