” ನಮ್ಮ‌ ಭವಿಷ್ಯ ಹಾಳಾಗದಂತೆ ತಡೆಯಲು ನಿಮಗೆ ಇನ್ನೂ ಅವಕಾಶವಿದೆ” – ಹಿಜಾಬ್ ವಿವಾದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಅಲಿಯಾ ಅಸ್ಸಾದಿ ಟ್ವೀಟ್!

ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಉಡುಪುಗಳನ್ನು ನಿಷೇಧಿಸಿದ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಕರ್ನಾಟದ ಹೈಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ವಿದ್ಯಾರ್ಥಿಗಳಲ್ಲಿ ಒಬ್ಬರಾದ ಅಲಿಯಾ ಅಸ್ಸಾದಿ, ‘ನಮ್ಮ ಭವಿಷ್ಯವನ್ನು ಹಾಳಾಗದಂತೆ ತಡೆಯಲು ನಿಮಗೆ ಇನ್ನೂ ಅವಕಾಶವಿದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋರಿದ್ದಾಳೆ.

ಈ ಕುರಿತು ಟ್ವೀಟ್ ಮೂಲಕ ಹಿಜಾಬ್‌ಗೆ ಮನವಿ ಮಾಡಿದ ಅಲಿಯಾ, ‘ದ್ವಿತೀಯ ಪಿಯುಸಿ ಪರೀಕ್ಷೆಗಳು ಈ ತಿಂಗಳ 22ರಿಂದ ಆರಂಭವಾಗಲಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ನಮ್ಮ ಭವಿಷ್ಯ ಹಾಳಾಗದಂತೆ ತಡೆಯಲು ನಿಮಗೆ ಇನ್ನೂ ಅವಕಾಶವಿದೆ. ಹಿಜಾಬ್ ಧರಿಸಿ ಪರೀಕ್ಷೆಗಳನ್ನು ಬರೆಯಲು ನಮಗೆ ಅವಕಾಶ ನೀಡುವ ನಿರ್ಧಾರವನ್ನ ನೀವು ತೆಗೆದುಕೊಳ್ಳಬಹುದು. ದಯವಿಟ್ಟು ಇದನ್ನ ಪರಿಗಣಿಸಿ, ನಾವು ಈ ದೇಶದ ಭವಿಷ್ಯ’ ಎಂದಿದ್ದಾರೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget
error: Content is protected !!
Scroll to Top
%d bloggers like this: