ಕೊನೆಗೂ ಸಚಿವ ಈಶ್ವರಪ್ಪ ರಾಜೀನಾಮೆ!! ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಾಬೀತಾಯಿತೇ ಆರೋಪ!??

Share the Article

ಬೆಂಗಳೂರು ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಚಿವ ಈಶ್ವರಪ್ಪ ಅವರ ಕುರ್ಚಿಗೆ ಕಂಟಕ ತಂದಿದೆ. ಇತ್ತ ಸಂತೋಷ್ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಂತೆ ವಿಪಕ್ಷಗಳು ಈಶ್ವರಪ್ಪ ರಾಜೀನಾಮೆಗೆ ಒತ್ತಾಯ ಮಾಡಿದ್ದವು. ಪ್ರತಿಭಟನೆಗಳು ಕೂಡ ನಡೆದಿದ್ದವು. ಇದರ ಬೆನ್ನಲೇ ಈಶ್ವರಪ್ಪ ಅವರ ಜೊತೆ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಮಾತುಕತೆ ನಡೆಸಿದ್ದರು. ಹೀಗರುವಾಗಲೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಈಶ್ವರಪ್ಪ ದಿಢೀರ್ ರಾಜೀನಾಮೆ ಘೋಷಿಸಿದ್ದಾರೆ.

ಸಚಿವ ಈಶ್ವರಪ್ಪ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಬುಧವಾರ ಬೆಳಗ್ಗೆ ಹೇಳಿಕೊಂಡಿದ್ದರು.

ಬಿಜೆಪಿ ಕೇಂದ್ರ ನಾಯಕರ ಒತ್ತಡದಿಂದ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

Leave A Reply