ಈ 8 ದೇಶಗಳಿಂದ ಕರ್ನಾಟಕಕ್ಕೆ ಬರುವವರ ಮೇಲೆ ತೀವ್ರ ನಿಗಾ ; ಏಕೆ ಈ ಹೊಸ ನಿಯಮ-ಕ್ವಾರಂಟೈನ್ ಗೊತ್ತೇ ?
ದಕ್ಷಿಣ ಕೊರಿಯಾ, ಹಾಂಗ್‍ಕಾಂಗ್, ಚೀನಾ ದೇಶಗಳಲ್ಲಿ ಸಾಂಕ್ರಾಮಿಕದ ತೀವ್ರತೆ ಹೆಚ್ಚಿದೆ. ಜರ್ಮನಿ, ಯುಕೆಯಲ್ಲೂ ಸೋಂಕು ಹೆಚ್ಚಾಗಿದೆ.ಈ ಎಂಟು ದೇಶಗಳಲ್ಲಿ ಕೋವಿಡ್ ನಾಲ್ಕನೇ ಅಲೆ ಕಂಡುಬಂದಿದೆ. ಇಲ್ಲಿ ಎಕ್ಸ್‌ಇ ಹಾಗೂ ಎಂಇ ಎಂಬ ಹೊಸ ವೈರಾಣು ಪ್ರಭೇದಗಳು ಕಂಡುಬಂದಿವೆ.
ಚೀನಾ, ದಕ್ಷಿಣ ಕೊರಿಯಾ, ಹಾಂಗ್‍ಕಾಂಗ್ ಸೇರಿದಂತೆ ಎಂಟು ದೇಶಗಳಲ್ಲಿ ಕೋವಿಡ್ ಹರಡುವಿಕೆ ತೀವ್ರವಾಗಿದ್ದು, ಈ ದೇಶಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇರಿಸಲು ತೀರ್ಮಾನಿಸಲಾಗಿದೆ.
ಈ 8 ದೇಶಗಳಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ರಾಜ್ಯಕ್ಕೆ ಬರುವವರ ಮೇಲೆ ವಿಶೇಷ ನಿಗಾ ಇರಿಸಬೇಕಿದೆ. ಆ ಪ್ರಯಾಣಿಕರಿಗೆ ಥರ್ಮಲ್ ತಪಾಸಣೆ ಮಾಡುವುದು, ಅವರು ಮನೆಗೆ ತೆರಳಿದ ಬಳಿಕ ಒಂದು ವಾರ ಅಥವಾ ಹತ್ತು ದಿನ ಟೆಲಿ ಮಾನಿಟರಿಂಗ್ ಮಾಡುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.