ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಕಾರು, ಮರಕ್ಕೆ ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು 20 ಅಡಿ ಅಳಕ್ಕೆ ಬಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡ ಘಟನೆಯೊಂದು ಇಂದು ಬೆಳಿಗ್ಗೆ ಬಂಟ್ವಾಳದ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೂರ್ಜೆ ಸಮೀಪದ ಕಾಂದೋಡಿ ತಿರುವಿನಲ್ಲಿರುವ ಜವನ್ ಕೆರೆ ಎಂಬಲ್ಲಿ ಮೂರ್ಜೆ ಮೂಡಬಿದ್ರೆ ರಸ್ತೆಯಲ್ಲಿ ಅಪಘಾತ ನಡೆದಿದೆ. ಅಜ್ಜ ಮೊಮ್ಮಗ ಇಬ್ಬರು ಗಾಯಗೊಂಡಿದ್ದಾರೆ.

ಮೂಲ್ಕಿಯಿಂದ ಮೂಡಬಿದಿರೆಯಾಗಿ ಮೂರ್ಜೆ ಹೆದ್ದಾರಿಗೆ ಸೇರುವ ರಸ್ತೆಯಲ್ಲಿ ಅಪಘಾತ ನಡೆದಿದೆ. ತಂದೆ, ಮಗ ,ಮೊಮ್ಮಗ ಮೂವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದು ಚಾಲಕನಿಗೆ ಯಾವುದೇ ಗಾಯವಾಗಿಲ್ಲ.

ಗಾಯಗೊಂಡ ಪ್ರಯಾಣಿಕರ ಬಗ್ಗೆ ಸ್ಪಷ್ಟವಾದ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪುಂಜಾಲಕಟ್ಟೆ ಎಸ್.ಐ.ಸುತೇಶ್ ಅವರು ಭೇಟಿ ನೀಡಿದ್ದಾರೆ.

Leave A Reply