ವಿಮಾನದಲ್ಲಿ ಪ್ರಯಾಣಿಕನ ಮೊಬೈಲ್ ಬ್ಲಾಸ್ಟ್ !! | ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು
ಇಂಡಿಗೋದ ದಿಬ್ರುಗಢ್-ದೆಹಲಿ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್ ಫೋನ್ ಸ್ಫೋಟಗೊಂಡು, ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ನಡೆದಿದೆ.
ಪ್ರಯಾಣಿಕರ ಪೋನ್ ಗೆ ಒಮ್ಮೆಲೆ ಬೆಂಕಿ ಹತ್ತಿಕೊಂಡಿತ್ತು. ಆದರೆ ಕ್ಯಾಬಿನ್ ಸಿಬ್ಬಂದಿ ಅಗ್ನಿಶಾಮಕ ಸಾಧನದ ಸಹಾಯದಿಂದ ಬೆಂಕಿಯನ್ನು ನಂದಿಸಿದ್ದಾರೆ. ಇದರಿಂದ ಸಂಭವಿಸಬೇಕಾದ ಭಾರೀ ಅನಾಹುತ ತಪ್ಪಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯಿಸಿದ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅಧಿಕಾರಿಗಳು ಫ್ಲೈಟ್ 6ಇ 2037 ಅಸ್ಸಾಂನ ದಿಬ್ರುಗಢ್ನಿಂದ ದೆಹಲಿಗೆ ತೆರಳುತ್ತಿದ್ದಾಗ ಕ್ಯಾಬಿನ್ ಸಿಬ್ಬಂದಿಯೊಬ್ಬರು ಪ್ರಯಾಣಿಕರ ಫೋನ್ನಿಂದ ಬೆಂಕಿಯ ಕಿಡಿ ಮತ್ತು ಹೊಗೆ ಹೊರಗೆ ಹೋಗುತ್ತಿರುವುನ್ನು ಗಮನಿಸಿದ್ದಾರೆ. ನಂತರ ಕ್ಯಾಬಿನ್ ಸಿಬ್ಬಂದಿ ಅಗ್ನಿಶಾಮಕ ಸಾಧನವನ್ನು ಬಳಸಿ ಬೆಂಕಿಯನ್ನು ನಂದಿಸಿದ್ದಾರೆ.
ಬಳಿಕ ಗುರುವಾರ ಮಧ್ಯಾಹ್ನ 12.45ರ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಸದ್ಯ ಅದೃಷ್ಟವಶಾತ್ ಘಟನೆ ವೇಳೆ ಯಾವುದೇ ಯಾವುದೇ ಪ್ರಯಾಣಿಕರಿಗೆ ಅಥವಾ ಕ್ಯಾಬಿನ್ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ತಿಳಿಸಿದ್ದಾರೆ.