ಪಿಎಫ್‌ಐ ಭವಿಷ್ಯ ಅಡಕತ್ತರಿಯಲ್ಲಿ ! ನಿಷೇಧಕ್ಕೆ ಕೇಂದ್ರ ಚಿಂತನೆ

ನವದೆಹಲಿ : ದೇಶದ ಹಲವು ರಾಜ್ಯಗಳಲ್ಲಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂಬ ಆರೋಪ ಎದುರಿಸುತ್ತಿರುವ ಸಂಘಟನೆಯಾದ ಪಿಎಫ್ ಐ ಅನ್ನು ನಿಷೇಧಕ್ಕೆ ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಬೇಕಾದ ಎಲ್ಲಾ ಅಗತ್ಯ ಮಾಹಿತಿ ಕಲೆಗಳನ್ನು ಹಾಕಲಾಗುತ್ತಿದೆ ಎಂದು ತಿಳಿದುಬಂದಿದೆ.


Ad Widget

Ad Widget

Ad Widget

ಶ್ರೀರಾಮ ನವಮಿಯ ಬಳಿಕ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭುಗಿಲೆದ್ದ ಹಿಂಸಾಚಾರವನ್ನು ಸರ್ಕಾರ ಸೂಕ್ಷ್ಮವಾಗಿ ಅವಲೋಕಿಸಿದ್ದು, ಇದರ ಹಿಂದಿರುವವರು ಯಾರು ಎಂಬುದನ್ನು ಸರಕಾರ ಹಾಗೂ ಗುಪ್ತಚರ ಇಲಾಖೆ ಪತ್ತೆ ಹಚ್ಚಿವೆ ಎನ್ನಲಾಗಿದೆ.

ಪಿ ಎಫ್ ಐ ಸಂಘಟನೆಯನ್ನು ನಿಷೇಧಿಸುವಂತೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಕೇಂದ್ರಕ್ಕೆ ಮನವಿ ಮಾಡಿದ್ದವು.

ಈ ಹಿನ್ನೆಲೆಯಲ್ಲಿ ಪಿ ಎಫ್ ಐ ಸಂಘಟನೆ ನಿಷೇಧಿಸಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.

Leave a Reply

error: Content is protected !!
Scroll to Top
%d bloggers like this: