ಇನ್ನು ಮುಂದೆ ರೈಲಿನಲ್ಲಿ ಪ್ರಯಾಣಿಸುವ ವೇಳೆ ಜೋರಾಗಿ ಮಾತನಾಡುವಂತಿಲ್ಲ!
ಈಗ ನೀವು ರೈಲಿನಲ್ಲಿ ಪ್ರಯಾಣಿಸುವ ವೇಳೆ ಅನೇಕ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.
ಸಣ್ಣ ತಪ್ಪು ಕೂಡ ನಿಮ್ಮನ್ನು ದೊಡ್ಡ ತೊಂದರೆಗೆ ಸಿಲುಕಿಸಬಹುದು. ಇತ್ತೀಚೆಗಷ್ಟೇ ರೈಲ್ವೆ ಇಲಾಖೆ ಮಾಡಿರುವ ಬದಲಾವಣೆ ರಾತ್ರಿ ಪ್ರಯಾಣಿಸುವ ಪ್ರಯಾಣಿಕರಿಗೆ ಸಂಬಂಧಿಸಿದೆ.
ಈ ಹೊಸ ನಿಯಮಗಳ ಪ್ರಕಾರ, ಯಾವುದೇ ಪ್ರಯಾಣಿಕರು ಮೊಬೈಲ್‌ನಲ್ಲಿ ಗಟ್ಟಿ ಧ್ವನಿಯಲ್ಲಿ ಮಾತನಾಡುವಂತಿಲ್ಲ. ಜತೆಗೆ ಜೋರಾಗಿ ಹಾಡುಗಳನ್ನು ಹಾಕುವಂತಿಲ್ಲ. ಇತರೆ ಪ್ರಯಾಣಿಕರ ನಿದ್ರೆಗೆ ಯಾವುದೇ ತೊಂದರೆಯಾಗದಂತೆ ಮತ್ತು ಪ್ರಯಾಣದ ಸಮಯದಲ್ಲಿ ಶಾಂತಿಯುತವಾಗಿ ಮಲಗಲು ರೈಲ್ವೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ರೈಲಿನಲ್ಲಿ ಪ್ರಯಾಣಿಸುವಾಗ ರಾತ್ರಿ 10 ಗಂಟೆಯ ನಂತರ ಮೊಬೈಲ್‌ನಲ್ಲಿ ಜೋರಾಗಿ ಮಾತನಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರೈಲ್ವೆ ಮಂಡಳಿ ನಿರ್ಧರಿಸಿದೆ.