ಸುಳ್ಯ:ಇಲಿ ಪಾಷಾಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಸಾವು!
ಸುಳ್ಯ: ಇಲಿ ಪಾಷಾಣ ಸೇವಿಸಿ ಅಸ್ವಸ್ಥಳಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಮೂಲೆಮನೆ ಚಂದ್ರಹಾಸ ಅವರ ಪುತ್ರಿ ಜಯಲಕ್ಷ್ಮೀ
(18)ಎಂದು ಗುರುತಿಸಲಾಗಿದೆ.
ಎ.07ರಂದು ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಆಕೆಯನ್ನು ಮನೆಯವರು ಸುಳ್ಯ ಆಸ್ಪತ್ರೆಗೆ ಕರೆತಂದಿದ್ದು,ಎ.12 ರಂದು ಚೇತರಿಸಿಕೊಂಡ ಬಳಿಕ ಆಸ್ಪತ್ರೆಯಿಂದ ಮನೆಗೆ ಮರಳಿದ್ದರು.ಆದರೆ ಎ.13 ರಂದು ಮತ್ತೆ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಆಕೆಯನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಚಿಕಿತ್ಸೆ ಫಲಿಸದೆ ಎ.14 ರಂದು ಆಕೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.