ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಕಿದ ಹಾಡು ಹಾಕಿದ ಮುಸ್ಲಿಂ ಹುಡುಗರು ;

ಪಾಕಿಸ್ತಾನ್ ಜಿಂದಾಬಾದ್ ಹಾಡು ಹಾಕಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

 

ಈ ಘಟನೆ ನಡೆದದ್ದು ಉತ್ತರ ಪ್ರದೇಶದ ಬರೇಲಿಯಲ್ಲಿ.
ಬರೇಲಿ ಜಿಲ್ಲೆಯ ಭುಟಾ ಪೊಲೀಸ್ ಸ್ಟೇಶನ್ ವ್ಯಾಪ್ತಿಯಲ್ಲಿರುವ ಸಿಂಫೈ ಕಲನ್ ಎಂಬ ಹಳ್ಳಿಯಲ್ಲಿ.

ಅಲ್ಲಿ ಕಿರಾಣಿ ಅಂಗಡಿ ಇಟ್ಟಿರುವ ಮುಸ್ಲಿಂ ಯುವಕನೊಬ್ಬ ಮೊಬೈಲ್‌ನಲ್ಲಿ ಹಾಡೊಂದನ್ನು ಹಾಕಿದ್ದಾನೆ. ಅದರಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೇಳುತ್ತದೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ಸ್ಥಳೀಯ ಬಿಜೆಪಿ ನಾಯಕರು ಪೊಲೀಸರಿಗೆ ದೂರು ನೀಡಿದ್ದರು. ಕೂಡಲೇ ಇಬ್ಬರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಬರೇಲಿ ಎಸ್ಪಿ ರಾಜ್ ಕುಮಾರ್ ತಿಳಿಸಿದ್ದಾರೆ.

ಅಂಗಡಿಯ ಮಾಲೀಕ ಆತನ ತಾಯಿ ಪ್ರತಿಕ್ರಿಯೆ ನೀಡಿ, ನನ್ನ ಮಗ ಮೊಬೈಲ್‌ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಹಾಡು ಹಾಕಿದ್ದರ ಬಗ್ಗೆ ನಮಗೇನೂ ಗೊತ್ತಿಲ್ಲ ಎಂದಿದ್ದಾರೆ. ಆದರೆ ನನ್ನ ಕಿರಿಯ ಮಗ ಯಾವಾಗಲೂ ಮೊಬೈಲ್‌ನಲ್ಲಿ ಧಾರ್ಮಿಕ ಗೀತೆಗಳನ್ನು ಕೇಳುತ್ತಿರುತ್ತಾನೆ. ಇಂಥ ಘೋಷಣೆ ಇದ್ದಿದ್ದು ಅವನಿಗೂ ಗೊತ್ತಿರುವುದಿಲ್ಲ. ಯಾಕೆಂದರೆ ಈ ಹಿಂದೆ ಎಂದಿಗೂ ಇಂಥ ಹಾಡುಗಳನ್ನು ಅವನು ಹಾಕಿಲ್ಲ. ಮೇಲಾಗಿ ನನ್ನ ಮಗ ವಿದ್ಯಾವಂತನಲ್ಲ. ದಯವಿಟ್ಟು ಆತನನ್ನು ಬಿಟ್ಟುಬಿಡಿ ಎಂದು ಮನವಿ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಳುತ್ತಿರುವುದು ಇದೇ ಮೊದಲೇನೂ ಅಲ್ಲ. ಕಳೆದ ವರ್ಷ ನೊಯ್ಡಾದಲ್ಲಿ ಧಾರ್ಮಿಕ ಮೆರವಣಿಗೆಯ ವೇಳೆ ಮೂವರು ಮುಸ್ಲಿಂ ವ್ಯಕ್ತಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಅರೆಸ್ಟ್ ಆಗಿದ್ದರು. ಅದೂ ಕೂಡ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಬಂಧಿಸಲಾಗಿತ್ತು. ಬಂಧಿತರಾದ ಮೊಹಮ್ಮದ್ ಜಾಫರ್, ಸಮೀರ್ ಅಲಿ, ಅಲಿ ರಾಜಾ ಎಂಬುವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು.

Leave A Reply

Your email address will not be published.