ದ್ವಿತೀಯ ಪಿಯುಸಿ ಪರೀಕ್ಷೆ 2022: ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ;
ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ನಿಮಗಾಗಿ ಕೆಎಸ್‌ಆರ್‌ಟಿಸಿ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಇದೇ ತಿಂಗಳ 22 ರಿಂದ ಮೇ 18 ರವರೆಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.
ಈ ಕಾರಣದಿಂದ ವಿದ್ಯಾರ್ಥಿಗಳಿಗೋಸ್ಕರ ಕೆಎಸ್‌ಆರ್‌ಟಿಸಿ ನಿಗಮವು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳವರೆಗೆ ಉಚಿತವಾಗಿ ಪ್ರಯಾಣಿಸುವ ಅವಕಾಶವನ್ನು ಕಲ್ಪಿಸಿದೆ.
ಅಲ್ಲದೆ ಪರೀಕ್ಷೆ ಮುಗಿದ ನಂತರ ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಉಚಿತವಾಗಿ ಸರ್ಕಾರಿ ಬಸ್‌ನಲ್ಲಿ ವಾಪಾಸ್ ತೆರಳಬಹುದಾಗಿದೆ.
ವಿದ್ಯಾರ್ಥಿಗಳು ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಲ್ಲಿ ಪರೀಕ್ಷಾ ಕೇಂದ್ರಗಳು ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದ ಪರೀಕ್ಷಾ ಕೇಂದ್ರಗಳವರೆಗೆ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ನೀಡಬೇಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಕ.ರಾ.ರ.ಸಾ.ನಿಗಮದ ಬಳಿ ಮನವಿ ಮಾಡಿಕೊಂಡಿತ್ತು.
ಈಗ ಈ ಮನವಿಯನ್ನ ಸ್ವೀಕರಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದೆ.