ಮದುವೆ ಮಂಟಪದಲ್ಲಿ ತಾಳಿಕಟ್ಟಲು ರೆಡಿಯಾಗಿದ್ದ ವರನನ್ನೇ ಎತ್ತಾಕೊಂಡೋದ ಪೊಲೀಸ್ !! | ಕಾರಣ ಏನು ಗೊತ್ತೇ!?
ಮದುವೆ ಮಂಟಪದಲ್ಲಿ ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ವರ ಅಥವಾ ವಧು ಎಸ್ಕೇಪ್ ಆಗೋದು, ತಾಳಿ ಕಟ್ಟೋ ವೇಳೆ ವರ ಅಥವಾ ವಧುವಿನ ಲವ್ವರ್ ಗಲಾಟೆ ಮಾಡಿದಂತಹ ಅನೇಕ ಘಟನೆಗಳು ನಡೆಯುತ್ತಿರುತ್ತವೆ. ಆದರೆ ಇದೀಗ ಮಧ್ಯಪ್ರದೇಶದಲ್ಲಿ ವಿಚಿತ್ರ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ.
ಹೌದು. ವರ ಇನ್ನೇನೋ ವಧುವಿಗೆ ತಾಳಿ ಕಟ್ಟಲು ಅಣಿಯಾಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟ ಪೊಲೀಸರು ವರನನ್ನು ಅರೆಸ್ಟ್ ಮಾಡಿ ಕರೆದೊಯ್ದಿದ್ದಾರೆ. ಕಾರಣ ವರ ಅತ್ಯಾಚಾರ ಪ್ರಕರಣವೊಂದರ ಆರೋಪಿ !!
ಮದುವೆ ಮಾಡಿಕೊಳ್ಳುವ ನೆಪದಲ್ಲಿ ವರ, ಆತನ ಸ್ನೇಹಿತೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿತ್ತು. ಅಲ್ಲದೆ ಈ ಸಂಬಂಧ ಜಬಲ್ಪುರ್ ಲಾರ್ಡ್ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಮದುವೆಯಾಗುವುದಾಗಿ ನಂಬಿಸಿ ತನ್ನ ಸ್ನೇಹಿತೆಯನ್ನು ಹೋಟೆಲ್ಗೆ ಕರೆದೊಯ್ದಿದ್ದ ವರ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಳು.
ಈ ಸಂಬಂಧ ಪ್ರತಿಕ್ರಿಯಿಸಿರುವ ಪೊಲೀಸ್ ವರಿಷ್ಠಾಧಿಕಾರಿ, ವರ ಅನುಜ್ ದುಬೆ ತನ್ನ ಸ್ನೇಹಿತೆ ಮೇಲೆ ಕಳೆದ ಕೆಲ ತಿಂಗಳ ಹಿಂದೆ ಅತ್ಯಾಚಾರವೆಸಗಿದ್ದಾಗಿ ಪ್ರಕರಣ ದಾಖಲಾಗಿತ್ತು. ಯುವತಿ ಜೊತೆ ದೇವಸ್ಥಾನವೊಂದರಲ್ಲಿ ಮದುವೆ ಕೂಡ ಮಾಡಿಕೊಂಡಿದ್ದನಂತೆ. ಈ ಬೆನ್ನಲ್ಲೇ ಆಕೆಯನ್ನು ಹೋಟೆಲ್ ಗೆ ಕರೆದೊಯ್ದು ಅತ್ಯಾಚಾರ ಎಸಗಲಾಗಿತ್ತು. ಬಳಿಕ ಬೇರೆ ಯುವತಿ ಜೊತೆ ಮದುವೆ ಮಾಡಿಕೊಳ್ಳಲು ಮುಂದಾಗಿದ್ದು, ಈ ಸಂಬಂಧ ಸಂತ್ರಸ್ತ ಯುವತಿ ದೂರು ದಾಖಲಿಸಿದ್ದಳು.
ಯುವತಿ ದೂರಿನನ್ವಯ ಏಪ್ರಿಲ್ 25ರಂದು ಅನುಜ್ ದುಬೆ ಮದುವೆ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿ ಆತನನ್ನು ಅರೆಸ್ಟ್ ಮಾಡಿದ್ದಾರೆ ಪೊಲೀಸರು. ಅದಲ್ಲದೆ ಈ ಪ್ರಕರಣದ ತನಿಖೆ ಮುಂದುವರೆಸುವುದಾಗಿ ಪೊಲೀಸರು ಇದೇ ವೇಳೆ ತಿಳಿಸಿದ್ದಾರೆ.