ಇನ್ನು ಮುಂದೆ ರಾಜ್ಯದ ಗ್ರಾಮ ಪಂಚಾಯತಿಯಲ್ಲೇ ಸಿಗುತ್ತೆ ‘ಮದುವೆ ಸರ್ಟಿಫಿಕೇಟ್’

ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಇನ್ಮುಂದೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲೇ ಮ್ಯಾರೇಜ್ ಸರ್ಟಿಫಿಕೇಟ್ ಸಿಗಲಿದೆ ಎಂದಿದೆ.

ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನ ನೇಮಿಸಿದ್ದು, ಮದುವೆ ನೋಂದಣಿ ಅಧಿಕಾರವನ್ನ ನೀಡಲಾಗಿದೆ. ಹೀಗಾಗಿ ಇನ್ಮುಂದೆ ಗ್ರಾಮ ಪಂಚಾಯಿತಿಗಳಲ್ಲೇ ಮದುವೆ ಸರ್ಟಿಫಿಕೇಟ್ ಸಿಗಲಿದೆ ಎಂದಿದೆ.

Leave A Reply

Your email address will not be published.