ಉಡುಪಿ : ಕೆಮಿಕಲ್ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ; ಅಪಾರ ಸೊತ್ತು ಬೆಂಕಿಗಾಹುತಿ!

Share the Article

ಉಡುಪಿ ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಶನಿವಾರ ಮಧ್ಯರಾತ್ರಿ ವೇಳೆ ಭಾರೀ ಬೆಂಕಿ ಅನಾಹುತವೊಂದು ಸಂಭವಿಸಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

ವೆಸ್ಟೆಕ್ ಎಂಟರ್ ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಇಂಕ್ ಪ್ಲಾಂಟ್ ನಲ್ಲಿ ರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿದೆ.
ಈ ಬೆಂಕಿ ಇಡೀ ಫ್ಯಾಕ್ಟರಿಗೆ ವಿಸ್ತರಿಸಿತು. ಇದರಿಂದ ಅಪಾರ ಸೊತ್ತುಗಳು ಬೆಂಕಿಗೆ ಆಹುತಿ ಆಗಿದ್ದು, ಇಡೀ ಪರಿಸರ ಹೊಗೆಯಿಂದ ಆವರಿಸಿಕೊಂಡಿತ್ತು.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ನಸುಕಿನ ವೇಳೆ ಬೆಂಕಿ ನಂದಿಸುವಲ್ಲಿ ಸಿಬ್ಬಂದಿ ಯಶಸ್ವಿಯಾದರು.

Leave A Reply