ರಾಜ್ಯಾದ್ಯಂತ ಭಾರಿ ಮಳೆ ; ಹವಾಮಾನ ಇಲಾಖೆಯಿಂದ ಈ ಮುನ್ಸೂಚನೆಗಳು
ಪಶ್ಚಿಮ ಬಂಗಾಳ ಮತ್ತು ದಕ್ಷಿಣ ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯಿಂದಾಗಿ, ರಾಜ್ಯಾಧ್ಯಂತ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 19 ಮತ್ತು 20ರಂದು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕಾರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಇಂದಿನಿಂದ ಏಪ್ರಿಲ್ 21ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಧಾರವಾಡ, ಬೀದರ್, ಕಲಬುರ್ಗಿ, ಹಾವೇರಿ, ಗದಗ, ಬೆಳಗಾವಿ, ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಏಪ್ರಿಲ್ 18ರ ಇಂದು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆ ಬಳಿಕ ಮುಂದಿನ ಮೂರು ದಿನ ಕೂಡ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ
ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಇತರೆ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಘೋಷಿಸಿದೆ.
ಶಿವಮೊಗ್ಗ, ಮೈಸೂರು, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.