ದೇವರಿಂದಲೂ ಕಮಿಷನ್ ಕೇಳುವ ಬಿಜೆಪಿ ಸರಕಾರದ್ದು ಯಾವ ರೀತಿಯ ಧರ್ಮ ರಕ್ಷಣೆ? – ಸಿದ್ದರಾಮಯ್ಯ

ಬಿಜೆಪಿ ಸರಕಾರರ ಕೇವಲ ಗುತ್ತಿಗೆದಾರರಿಂದ ಮಾತ್ರ ಕಮೀಷನ್ ಕೇಳೋದಲ್ಲ, ಮಠಾಧೀಶರಿಂದಲೂ ಪರ್ಸಂಟೇಜ್ ಕೇಳುತ್ತಿದೆ. ‘ಮಠಗಳು ಶೇ, 30 ಪರ್ಸೆಂಟೇಜ್ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆಯಾಗುತ್ತಿದೆ’ ಎಂಬ ಬೀಳಗಿ ಬಾಳಗಂಡಿಯ ದಿಂಗಾಲೇಶ್ವರ ಸ್ವಾಮೀಜಿ ಆರೋಪ ಮಾಡಿರುವ ವಿಚಾರವಾಗಿ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮಾಡಿದ್ದಾರೆ.

 

ಸಿದ್ದರಾಮಯ್ಯನವರು ತಮ್ಮ ಟ್ವೀಟ್ ನಲ್ಲಿ, ” ಧರ್ಮ ರಕ್ಷಕರು ಎಂದು ತಮ್ಮನ್ನು ಕರೆದುಕೊಳ್ಳುವ ಬಿಜೆಪಿಯವರು ಮಂದಿರಗಳ ಅನುದಾನವನ್ನೂ ಬಿಡದೆ 30% ಕಮಿಷನ್ ತಿಂದು ತೇಗುತ್ತಿರುವುದು ನಾಚಿಕೆಗೇಡು.10% ಡಿಸ್ಕೌಂಟ್ ಯಾಕೆ? ಅದನ್ನು ತಿಂದು ಬಿಡಿ, ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ ಎಂದು ಹರಿಹಾಯ್ದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ ಎಂದು ಖಾಲಿ ಬುಟ್ಟಿಯ ಮುಂದೆ ನಿಂತು ಪುಂಗಿ ಊದಬೇಡಿ, ದಾಖಲೆಗಳನ್ನು ಬಿಡುಗಡೆ ಮಾಡಿ ಮಾತನಾಡಿ. ಬುಟ್ಟಿಯ ಒಳಗಿರುವುದು, ನಾಗರ ಹಾವೋ, ಹಾವಿನಪುರದ ಹಾವೋ ನೋಡಿಯೇ ಬಿಡೋಣ ಎಂದು ಇದೇ ವೇಳೆ ಸವಾಲ್ ಹಾಕಿದ್ದಾರೆ.

Leave A Reply

Your email address will not be published.