BMTC ಯಿಂದ ಉಚಿತ ಲಘು ಮತ್ತು ಭಾರೀ ವಾಹನ ತರಬೇತಿ ; ಆಸಕ್ತರು ಅರ್ಜಿ ಸಲ್ಲಿಸಬಹುದು!

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು( ಬಿಎಂಟಿಸಿ) ಉಚಿತ ಊಟ, ವಸತಿಯೊಂದಿಗೆ ಉಚಿತ ಡ್ರೈವಿಂಗ್ (ಲಘು ಮತ್ತು ಭಾರಿ ವಾಹನ ಚಾಲನ) ತರಬೇತಿ ನೀಡುತ್ತಿದೆ. ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಬಹುದು.

ಲಘು ವಾಹನ ಚಾಲನಾ ತರಬೇತಿ (ಕಾರ್ / ಜೀಪ್) ಪಡೆಯಲು ಅರ್ಹತೆ, ಅಗತ್ಯ ದಾಖಲೆಗಳು

1. ಕನಿಷ್ಠ 18 ವರ್ಷ ವರ್ಷ ಪೂರೈಸಿರಬೇಕು.
ಜನ್ಮ ದಿನಾಂಕದ ಬಗ್ಗೆ ಜನನ ಪ್ರಮಾಣ ಪತ್ರ ಅಥವಾ
ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಅಥವಾ ಶಾಲಾ
ವರ್ಗಾವಣಾ ಪ್ರಮಾಣ ಪತ್ರ (ಟಿ.ಸಿ) ಅಥವಾ ನೋಟರಿಯಿಂದ ಪ್ರಮಾಣ ಪತ್ರ ಹೊಂದಿರಬೇಕು.
2. ಜಾತಿ ಮತ್ತು ಆದಾಯ ಪ್ರಮಾಣ ಪತ್ರ
3. ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ-5

ಭಾರಿ ವಾಹನ ಚಾಲನಾ ತರಬೇತಿ (ಬಸ್) ಪಡೆಯಲು ಅರ್ಹತೆ, ಅಗತ್ಯ ದಾಖಲೆಗಳು

1. ಅಭ್ಯರ್ಥಿಗೆ ಕನಿಷ್ಠ 20 ವರ್ಷಗಳ ವಯೋಮಿತಿ ಹೊಂದಿರಬೇಕು.
2. ಲಘು ವಾಹನ ಚಾಲನಾ ಅನುಜ್ಞಾಪತ್ರ ಪಡೆದು ಒಂದು ವರ್ಷ ಪೂರೈಸಿರಬೇಕು.
3. ಜನ್ಮ ದಿನಾಂಕದ ಬಗ್ಗೆ ಜನನ ಪ್ರಮಾಣ ಪತ್ರ ಅಥವಾ
ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಅಥವಾ ಶಾಲಾ
ವರ್ಗಾವಣಾ ಪ್ರಮಾಣ ಪತ್ರ (ಟಿ.ಸಿ) ಅಥವಾ
ನೋಟರಿಯಿಂದ ಪ್ರಮಾಣ ಪತ್ರ
4. ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ
ಪತ್ರ
5. ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ-5

ಅಭ್ಯರ್ಥಿಗಳಿಗೆ ಉಚಿತವಾಗಿ ಲಘು / ಭಾರಿ ವಾಹನ ಚಾಲನಾ ತರಬೇತಿಯನ್ನು 30 ದಿನಗಳವರೆಗೆ ನೀಡಲಾಗುತ್ತದೆ. ಮತ್ತು ತರಬೇತಿಯ ಅವಧಿಯಲ್ಲಿ ವಸತಿ ಮತ್ತು ಊಟೋಪಚಾರದ ವ್ಯವಸ್ಥೆಯನ್ನು ನೀಡಲಾಗುತ್ತದೆ.

ಈ ಮೇಲಿನ ಅರ್ಹತೆ ಹೊಂದಿರುವ, ಸದರಿ ಸೌಲಭ್ಯ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಪಂಗಡದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆ ಮತ್ತು 02 ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ತರಬೇತಿ ಕೇಂದ್ರ, ವಡ್ಡರಹಳ್ಳಿ, ದಾಸನಪುರ ಹೋಬಳಿ, ಬೆಂಗಳೂರು ಉತ್ತರ –562130, ಇಲ್ಲಿ ಹೆಸರು ನೋಂದಾವಣೆ ಮಾಡಿಕೊಳ್ಳಲು ತಿಳಿಸಲಾಗಿದೆ.

ಇತರೆ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 7760991348, 7892529634, 8549060653, 7760979980, 7760991086, 080-22537481 ಅನ್ನು ಸಂಪರ್ಕಿಸಬಹುದಾಗಿದೆ.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆ ಅಡಿಯಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ ಎಲ್ಲ ಸಮುದಾಯಗಳ ಅಭ್ಯರ್ಥಿಗಳಿಗೆ ಈ ಉಚಿತ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ ನೀಡಲಿದ್ದು, ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಚಾಲನಾ ಅನುಜ್ಞಾ ಪತ್ರ / ಬ್ಯಾಡ್ಜ್ ನೀಡುವ ಕಾರ್ಯಕ್ರಮವನ್ನು ಬಿಎಂಟಿಸಿ ಹಮ್ಮಿಕೊಂಡಿದೆ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವಾಗ ಎಂದು ತಿಳಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಬೇಗ ಅರ್ಜಿ ಹಾಕಿ ಹೆಸರು ನೋಂದಾಯಿಸಿಕೊಳ್ಳಬಹುದು.

Leave A Reply

Your email address will not be published.