ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೈತಿಕ ಶಿಕ್ಷಣ ಶಾಲಾ ಪಠ್ಯಕ್ರಮದಲ್ಲಿ ಕುರಾನ್ ಸೇರ್ಪಡೆ: ಸಚಿವ ಬಿ ಸಿ ನಾಗೇಶ್

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲಾ
ಪಠ್ಯಪುಸ್ತಕದಲ್ಲಿ ನೈತಿಕ ಶಿಕ್ಷಣವನ್ನು ಸೇರಿಸಲಾಗುವುದು ಎಂದು‌ ಬಿ ಸಿ ನಾಗೇಶ್ ಹೇಳಿದ್ದಾರೆ.

“ಪಂಚತಂತ್ರ, ರಾಮಾಯಣ, ಮಹಾಭಾರತ, ಭಗವದ್ಗೀತೆ, ಕುರಾನ್ ಮತ್ತು ಇತರ ನೈತಿಕ ಶಿಕ್ಷಣಗಳನ್ನು ಈ ಬಾರಿಯ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲಾ ಪಠ್ಯಪುಸ್ತಕದಲ್ಲಿ ಸೇರಿಸಲಾಗುವುದು. ಸಮಿತಿಯೊಂದು ಪಠ್ಯಕ್ರಮವನ್ನು ನಿರ್ಧರಿಸಲಿದ್ದು. ಈ ನೈತಿಕ ಶಿಕ್ಷಣದ ಪಠ್ಯಕ್ಕೆ ಪರೀಕ್ಷೆಯಿರುವುದಿಲ್ಲ” ಎಂದು ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಬಿ ಸಿ ನಾಗೇಶ್ ಹೇಳಿದ್ದಾರೆ‌

ಅದು ಕೇವಲ ಒಂದು ಧರ್ಮಕ್ಕೆ ಸೀಮಿತವಾಗುವುದಿಲ್ಲ.
ಎಲ್ಲಾ ಧರ್ಮಗಳ ನೈತಿಕ ಮೌಲ್ಯಗಳನ್ನು ಕಲಿಸುವ
ಪಠ್ಯಗಳನ್ನು ಸೇರಿಸಲಾಗುವುದು ಎಂದು ಶಿಕ್ಷಣ ಸಚಿವ ಹೇಳಿದ್ದಾರೆ.

Leave A Reply

Your email address will not be published.