ನಾಳೆ ರಾತ್ರಿ 9:30ಕ್ಕೆ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿಯಿಂದ ಭಾಷಣ !! | ದೇಶದ ಜನತೆಗೆ ಏನು ಹೇಳಲಿದ್ದಾರೆ ಪ್ರಧಾನಿ ??
ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸೂರ್ಯಾಸ್ತದ ನಂತರ ಗುರುವಾರ ರಾತ್ರಿ ಐತಿಹಾಸಿಕ ಕೆಂಪುಕೋಟೆಯಿಂದ ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಕೆಂಪುಕೋಟೆಯ ಲಾನ್ಸ್ ನಿಂದ ಮೋದಿ ಭಾಷಣ ಮಾಡಲಿದ್ದಾರೆ. ಗುರು ತೇಜ್ ಬಹದ್ದೂರ್ ಅವರ 400ನೇ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಈ ಕಾರ್ಯಕ್ರಮ ನಡೆಯಲಿದೆ. 1675ರಲ್ಲಿ ಸಿಖ್ ಸಮುದಾಯದ 9ನೇ ಗುರು ಗುರು ತೇಗ್ ಬಹದ್ದೂರ್ ಕೊಲ್ಲಲು ಮೊಘಲ್ ದೊರೆ ಔರಂಗಜೇಬ್ ಆದೇಶ ನೀಡಿದ್ದ ಕಾರಣದಿಂದ ಕೆಂಪುಕೋಟೆಯನ್ನು ವೇದಿಕೆಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಸಂಸ್ಕೃತಿ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಈ ರೀತಿ ಕೆಂಪುಕೋಟೆಯಿಂದ ಭಾಷಣ ಮಾಡುತ್ತಿದ್ದಾರೆ. 2018ರಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಂದ ಅಜಾದ್ ಹಿಂದ್ ಸರ್ಕಾರ ರಚನೆಯ 75ನೇ ವರ್ಷಾಚರಣೆ ಅಂಗವಾಗಿ ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜವನ್ನು ಮೋದಿ ಹಾರಿಸಿದ್ದರಲ್ಲದೇ ರಾತ್ರಿ 9 ಗಂಟೆಯಲ್ಲಿ ಭಾಷಣ ಮಾಡಿದ್ದರು.
ಗುರುವಾರ ರಾತ್ರಿ 9:30 ಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದು, ಸಮುದಾಯಗಳ ನಡುವೆ ಸೌಹಾರ್ದತೆ ಮತ್ತು ಶಾಂತಿ ಮೂಡಿಸುವ ಬಗ್ಗೆ ಭಾಷಣವಿರಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 400 ಸಿಖ್ ಸಂಗೀತಗಾರಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪ್ರಧಾನಿ ಮೋದಿ ಅವರು ಅಂಚೆ ಸ್ಟಾಂಪ್ ಮತ್ತು ಸ್ಮರಣಾರ್ಥ ನಾಣ್ಯಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.