ಹ್ಯಾಟ್ರಿಕ್ ಹೀರೋ ಶಿವಣ್ಣನ ಆರೋಗ್ಯದಲ್ಲಿ ಏರುಪೇರು!

ಮೈಸೂರು:ನಟನೆಯಲ್ಲೇ ಎಲ್ಲರ ಮನ ಗೆದ್ದಿರುವ ಹ್ಯಾಟ್ರೀಕ್ ಹೀರೋ ಎಂದೇ ಖ್ಯಾತಿ ಗಳಿಸಿರುವಂತ ದೊಡ್ಮನೆಯ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು ಆಗಿರುವ ಮಾಹಿತಿ ತಿಳಿದು ಬಂದಿದೆ.

ಶೂಟಿಂಗ್ ನಲ್ಲಿ ನಿರತರಾಗಿದ್ದ ವೇಳೆ ಜ್ವರ,ಮೈ ಕೈ ನೋವು ಕಾಣಿಸಿಕೊಂಡಿದೆ. ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಶೂಟಿಂಗ್ ಗೆ ಮರಳಿದ್ದಾರೆ ಎಂದು ಹೇಳಲಾಗುತ್ತಿದೆ.

ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಜೇಮ್ಸ್ ಚಿತ್ರದ ಬಿಡುಗಡೆ, ಚಿತ್ರ ಪ್ರದರ್ಶನದ ಸೇರಿದಂತೆ ವಿವಿಧ ವಿಚಾರಗಳಲ್ಲಿ ಬ್ಯುಸಿ ಇದ್ದು,ಈ ಬಳಿಕ ವೇದಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಂತ ನಟ ಶಿವರಾಜ್ ಕುಮಾರ್ ಅವರಿಗೆ ಜ್ವರ ಕಾಣಿಸಿಕೊಂಡಿತ್ತು ಎಂದು ಹೇಳಲಾಗುತ್ತಿದೆ. ಹೀಗಾಗಿ ಮೈಸೂರಿನ ಬಿಜೆಪಿಎಸ್ ಆಸ್ಪತ್ರೆಗೆ ತೆರಳಿ, ಪರೀಕ್ಷಿಸಿ, ಚಿಕಿತ್ಸೆ ಪಡೆದು ಮರಳಿದ್ದಾರೆ ಎಂದು ಹೇಳಲಾಗುತ್ತಿದೆ.

Leave A Reply

Your email address will not be published.