KGF-2 ಸಿನಿಮಾ ವೀಕ್ಷಣೆ ವೇಳೆ ಚಿತ್ರಮಂದಿರದಲ್ಲಿ ಯುವಕನೋರ್ವನ ಮೇಲೆ ಗುಂಡಿನ ದಾಳಿ! ಸೀಟಿನ ಮೇಲೆ ಕಾಲು ಹಾಕಿಕೊಂಡು ಕುಳಿತಿದ್ದಕ್ಕೆ ಶೂಟೌಟ್ !

ಕೆಜಿಎಫ್ ಸಿನಿಮಾ ನೋಡುವಾಗಲೇ ಚಿತ್ರಮಂದಿರದಲ್ಲೇ ಯುವಕನೋರ್ವ ಮೇಲೆ ಗುಂಡಿನ ದಾಳಿ ನಡೆದಿದೆ. ಈ ದುರ್ಘಟನೆ ಮಂಗಳವಾರ ರಾತ್ರಿ 10-30ರ ಸುಮಾರಿಗೆ ಈ ಸಂಭವಿಸಿದ್ದು, ಸಿನಿಮಾ ನೋಡಲು ಬಂದಿದ್ದ ಪ್ರೇಕ್ಷಕರು ಬೆಚ್ಚಿಬಿದ್ದಿದ್ದಾರೆ. ಥಿಯೇಟರ್ ಬಂದ್ ಮಾಡಲಾಗಿದೆ.

ಹಾವೇರಿ ಜಿಲ್ಲೆಯ ಶಿಗ್ಗಾಂವ ಪಟ್ಟಣದ ರಾಜಶ್ರೀ ಟಾಕೀಸಿನಲ್ಲಿ ಮಂಗಳವಾರ ರಾತ್ರಿ ಶೋ ಕೆಜಿಎಫ್-2 ಸಿನಿಮಾ ಪ್ರಾರಂಭವಾದ ವೇಳೆ ಗುಂಡಿನ ದಾಳಿಯಾಗಿದೆ. ಸಿನಿಮಾ ನೋಡುವಾಗ ಸೀಟ್ ಮೇಲೆ ಕಾಲು ಹಾಕಿಕೊಂಡು ಕುಳಿತಾಗ ಯುವಕರಿಬ್ಬರ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಮಾತಿಗೆ ಮಾತು ಬೆಳೆದು ಪಕ್ಕದಲ್ಲಿದ್ದ ವ್ಯಕ್ತಿಯು ತನ್ನ ರಿವಾಲ್ವಾರ್ ನಿಂದ ಶಿಗ್ಗಾಂವ ತಾಲೂಕಿನ ಮುಗಳಿ ಗ್ರಾಮದ ವಸಂತಕುಮಾರ್ ಶಿವಪೂರ(28) ಎಂಬಾತನ ಮೇಲೆ 3 ಸುತ್ತಿನ ಗುಂಡು ಹಾರಿ ಪರಾರಿಯಾಗಿದ್ದಾನೆ. ವಸಂತಕುಮಾರ್‌ನ ಹೊಟ್ಟೆಗೆ ಗುಂಡು ಹೊಕ್ಕಿದ್ದು, ತಕ್ಷಣ ಸಾರ್ವಜನಿಕರು ಆಸ್ಪತ್ರೆಗೆ ರವಾನಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಗುಂಡಿನ ದಾಳಿ ನಡೆದ ಸ್ಥಳದಲ್ಲಿದ್ದ 2 ಖಾಲಿ ಕೋಕಾಗಳನ್ನು ಜಪ್ತಿ ಮಾಡಲಾಗಿದೆ. ಗಾಯಾಳು
ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಕೇಸ್ ದಾಖಲಿಸಲಾಗಿದ್ದು, ಆರೋಪಿ ಪತ್ತೆಗಾಗಿ ಎರಡು ತಂಡ ರಚನೆ ಮಾಡಲಾಗಿದೆ.

error: Content is protected !!
Scroll to Top
%d bloggers like this: