ಧಾರ್ಮಿಕ ಕೇಂದ್ರಗಳಲ್ಲಿ ಸ್ಪೀಕರ್‌ಗಳಿಂದ ಹೊರಹೊಮ್ಮುವ ಧ್ವನಿ ಸಮಾರಂಭ ನಡೆಯುವ ಸ್ಥಳ ದಾಟಕೂಡದು-ಯು.ಪಿ.ಸರ್ಕಾರದಿಂದ ಹೊಸ ನಿಯಮ ಜಾರಿ

ಉತ್ತರ ಪ್ರದೇಶದಲ್ಲಿ ಯಾವುದೇ ಧಾರ್ಮಿಕ ಮೆರವಣಿಗೆ ನಡೆಸಲು ಮುಂದಾಗುವ ಸಂಘಟನೆ ಸ್ಥಳೀಯ ಆಡಳಿತದಿಂದ ಕಡ್ಡಾಯವಾಗಿ ಅನುಮತಿ ಪಡೆದಿರಲೇಬೇಕು. ಜತೆಗೆ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಬಳಸಲಾಗುವ ಧ್ವನಿವರ್ದಕಗಳನ್ನುಮತ್ತೊಬ್ಬರಿಗೆ ತೊಂದರೆಯಾಗದಂತೆ ಬಳಸಬೇಕು. ಸ್ಪೀಕರ್‌ಗಳಿಂದ ಹೊರಹೊಮ್ಮುವ ಧ್ವನಿ ಸಮಾರಂಭ ನಡೆಯುವ ಸ್ಥಳವನ್ನು ದಾಟಕೂಡದು ಎಂದು ಹೊಸ ನಿಯಮಗಳನ್ನು ಜಾರಿ ಮಾಡಲಾಗಿದೆ.

 

ಮೆರವಣಿಗೆ ನಡೆಸಲು ಅನುಮತಿ ಕೋರುವ ಯಾವುದೇ ಸಂಘಟನೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುತ್ತೇವೆ ಎಂಬ ಬಗ್ಗೆ ಪ್ರಮಾಣಪತ್ರವನ್ನೂ ಸ್ಥಳೀಯ ಆಡಳಿತಕ್ಕೆ ನೀಡಬೇಕಾಗುತ್ತದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್‌ ಎಲ್ಲರಿಗೂ ತಮ್ಮ ಧಾರ್ಮಿಕ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ಆಚರಿಸಲು ಅವಕಾಶವಿದೆ. ಆದರೆ, ಆಚರಣೆಗಳು ಇತರರಿಗೆ ತೊಂದರೆಯಾಗಬಾರದಷ್ಟೇ ಎಂದಿದ್ದಾರೆ.

ಮುಂದಿನ ತಿಂಗಳು ರಂಜಾನ್‌, ಅಕ್ಷಯ ತೃತೀಯ ಒಂದೇ ದಿನ ಬರಲಿದ್ದು, ಅದರ ಬೆನ್ನಿಗೇ ಹಲವಾರು ಹಬ್ಬಗಳು ಸಾಲುಗಟ್ಟಿರುವ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ಕಟ್ಟೆಚ್ಚರ ವಹಿಸಬೇಕು ಎಂದು ಸೂಚಿಸಿದ್ದಾರೆ.

Leave A Reply

Your email address will not be published.