ಮಂಗಳೂರು: ನಾಳೆಯಿಂದ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿ !!

ನಾಳೆಯಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದೇ ಪರೀಕ್ಷೆಯನ್ನು ಸುಲಲಿತವಾಗಿ ನಡೆಸಲು ಕಲಂ 144ರ ಸಿಆಸಿ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ನಗರ ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ಘಟಕದ ವ್ಯಾಪ್ತಿಯಲ್ಲಿರುವ ಸಂಬಂಧಿತ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಈ ನಿಷೇದಾಜ್ಞೆ ಜಾರಿಯಲ್ಲಿರಲಿದೆ. ‌ಈ ಅವಧಿಯಲ್ಲಿ ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತು ಪಡಿಸಿ ಸಾರ್ವಜನಿಕರು 5 ಅಥವಾ ಅದಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಅಥವಾ ತಿರುಗಾಡುವುದನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರ ಬರೆದು ಹಂಚುವುದು, ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ಅದಲ್ಲದೆ, ಪರೀಕ್ಷೆ ಪ್ರಾರಂಭವಾಗುವ ಅರ್ಧಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಕೂಡ ನಿರ್ಬಂಧಿಸಲಾಗಿದೆ. ಮೊಬೈಲ್, ದೂರವಾಣಿ, ಪೇಜರ್ ಇತ್ಯಾದಿ ಎಲೆಕ್ಟ್ರಾನಿಕ್ ಸಂಪರ್ಕ ಉಪಕರಣಗಳ ಬಳಕೆ ಸಂ ನಿಷೇಧಿಸಲಾಗಿದೆ ಎಂದು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.