ಮಸೀದಿಯಲ್ಲಿ ಪ್ರಾರ್ಥನೆಗೆ ಕುಳಿತುಕೊಂಡಾಗ ಉಗ್ರರಿಂದ ಬಾಂಬ್ ಸ್ಫೋಟ ; 20 ಕ್ಕಿಂತಲೂ ಹೆಚ್ಚು ಮಂದಿ ಸಾವು, 65 ಮಂದಿ ಗಾಯ
ಉಗ್ರರು ಮಸೀದಿಗೆ ಬಾಂಬ್ ಸ್ಫೋಟ ನಡೆಸಿದ ಘಟನೆಯೊಂದು ಗುರುವಾರ ( ಇಂದು) ನಡೆದಿದೆ. ಈ ಬಾಂಬ್ ಸ್ಫೋಟದಲ್ಲಿ 20 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 65 ಮಂದಿ ಗಾಯಗೊಂಡಿದ್ದಾರೆ.
ಅಫ್ಘಾನಿಸ್ತಾನದ ಮಝಾರ್ ಈ ಷರೀಫ್ ಮಸೀದಿ ಮೇಲೆ ಉಗ್ರರು ಬಾಂಬ್ ಸ್ಫೋಟ ನಡೆಸಿದ್ದಾರೆ.
ಉತ್ತರ ಅಫ್ಘಾನ್ ನಗರದ ಶಿಯಾ ಪಂಗಡದ ಮಝಾರ್ ಇ ಷರೀಪ್ ಮಸೀದಿ ಮೇಲೆ ಬಾಂಬ್ ದಾಳಿ ನಡೆದಿದೆ. ಸ್ಫೋಟದಲ್ಲಿ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂಬುದಾಗಿ ತಾಲಿಬಾನ್ ಕಮಾಂಡರ್ ನ ವಕ್ತಾರ ಮೊಹಮ್ಮದ್ ಆಸೀಫ್ ವಾಝೇರಿ ಹೇಳಿದ್ದಾನೆ. ಬಾಂಬ್ ಸ್ಫೋಟದ ಹೊಣೆಯನ್ನು ತಾಲಿಬಾನ್ ನ ಸ್ಥಳೀಯ ಮುಖಂಡನೊಬ್ಬ ಹೊಣೆ ಹೊತ್ತುಕೊಂಡಿದ್ದಾನೆ ಎನ್ನಲಾಗಿದೆ.
ಗಾಯಾಳುಗಳನ್ನು ಆಂಬುಲೆನ್ಸ್ ಮತ್ತಿತರ ವಾಹನಗಳಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಸೀದಿಯಲ್ಲಿ ಮುಸ್ಲಿಮರು ಪವಿತ್ರ ರಂಜಾನ್ ಮಾಸವನ್ನು ಆಚರಿಸುತ್ತಿದ್ದು, ಭಕ್ತರು ಪ್ರಾರ್ಥನೆಗೆ ಕುಳಿತುಕೊಂಡಿದ್ದ ವೇಳೆ ಸ್ಫೋಟ ಸಂಭವಿಸಿದೆ.