ಪುತ್ತೂರು : ಕಾರಿನ ಕೆಳಗೆ ಮಲಗಿದ್ದ ವ್ಯಕ್ತಿಯ ಮೇಲೆ ಹರಿದ ಕಾರು, ಸ್ಥಳದಲ್ಲೇ ವ್ಯಕ್ತಿ ಸಾವು!

ಪುತ್ತೂರು: ಕಾರಿನ ಕೆಳಗೆ ಮಲಗಿದ್ದ ವ್ಯಕ್ತಿಯ ಮೇಲೆ ಕಾರೊಂದು ಹರಿದು ವ್ಯಕ್ತಿಯೋರ್ವ ಸಾವನ್ನಪ್ಪಿದ ದುರ್ಘಟನೆಯೊಂದು ನಡೆದಿದೆ. ದೇವಸ್ಥಾನದ ಗದ್ದೆ ಬದಿಯಲ್ಲಿ ಕಾರು ಪಾರ್ಕ್ ಮಾಡಿದ್ದು, ಈ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

 

ಕಾರು ಮೈ ಮೇಲೆ ಹರಿದ ಹಿನ್ನೆಲೆ ವ್ಯಕ್ತಿಯು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ ಎಂದು ತಿಳಿದು ಬಂದಿದೆ.
ಮೃತ ವ್ಯಕ್ತಿಯ ಪರಿಚಯ ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Leave A Reply

Your email address will not be published.