ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ!! ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದಾಗ ಬಯಲಾಯಿತು ಸತ್ಯ!

17 ವರ್ಷದ ಅಪ್ರಾಪ್ತೆಯ ಮೇಲೆ 12 ವರ್ಷದ ಬಾಲಕ ಅತ್ಯಾಚಾರ ಎಸಗಿ, ಆಕೆ ಗರ್ಭವತಿಯಾಗಲು ಕಾರಣನಾಗಿದ್ದಾನೆ. ತಮಿಳುನಾಡಿನ ತಂಜಾವೂರಿನಲ್ಲಿ ಈ ಘಟನೆ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.


Ad Widget

Ad Widget

Ad Widget

ಸಂತ್ರಸ್ತೆ ಮತ್ತು ಆರೋಪಿ ಬಾಲಕ ಇಬ್ಬರೂ ಕೂಡಾ ಶಾಲೆಯಿಂದ ಡ್ರಾಪ್ ಔಟ್ ಆಗಿದ್ದು, ಇಬ್ಬರು ಒಂದೇ ಗ್ರಾಮದಲ್ಲಿ ವಾಸಿಸುತ್ತಿದ್ದರು. ಹೊಟ್ಟೆ ನೋವು ಎಂದು ಸಂತ್ರಸ್ತೆ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ವೈದ್ಯರು ಆಕೆಯನ್ನು ಪರೀಕ್ಷಿಸಿದಾಗ ಒಂಬತ್ತು ತಿಂಗಳ ಗರ್ಭಿಣಿ ಎಂಬುದು ಪತ್ತೆಯಾಗಿತ್ತು. ಆಸ್ಪತ್ರೆಗೆ ದಾಖಲಾದ ಅದೇ ದಿನ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಈ ಬಗ್ಗೆ ಆಸ್ಪತ್ರೆಯ ವೈದ್ಯರು ಮಹಿಳಾ ಪೊಲೀಸರಿಗೆ ತಿಳಿಸಿದ್ದು, ಬಳಿಕ ಪೊಲೀಸರು ಅಪ್ರಾಪ್ತೆಯನ್ನು ವಿಚಾರಣೆಗೊಳಪಡಿಸಿದ್ದರು. ತಾನು ಗರ್ಭ ಧರಿಸಲು ಬಾಲಕ ಕಾರಣ ಎಂದು ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಳು. ಆಕೆಯ ಆರೋಪದ ಮೇಲೆ 12 ವರ್ಷದ ಬಾಲಕನನ್ನು ಬಂಧಿಸಿ, ತಂಜಾವೂರಿನ ಬಾಲಾಪರಾಧ ಗೃಹಕ್ಕೆ ಕಳುಹಿಸಲಾಗಿದೆ ಎಂದು ವರದಿ ಹೇಳಿದೆ.

ಸಂತ್ರಸ್ತೆಯ ಹೇಳಿಕೆ ಆಧಾರದ ಮೇಲೆ ಬಾಲಕನನ್ನು ಬಂಧಿಸಿದ ಹೊರತಾಗಿಯೂ, ಈ ಪ್ರಕರಣದಲ್ಲಿ ಹುಡುಗನನ್ನು ಹೊರತುಪಡಿಸಿ, ಬೇರೆ ವ್ಯಕ್ತಿಗಳು ಶಾಮೀಲಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ವರದಿ ವಿವರಿಸಿದೆ.

Leave a Reply

error: Content is protected !!
Scroll to Top
%d bloggers like this: