ಧರ್ಮಸ್ಥಳದ ಹೇಮಾವತಿ ವಿ.ಹೆಗ್ಗಡೆ, ತುಳು ರಂಗಭೂಮಿಯ ತೆಲಿಕೆದ ಬೊಳ್ಳಿ ಹಾಗೂ ಪುನರೂರು ಪಾಲಿಗೆ ಒಲಿದ ಗೌರವ ಡಾಕ್ಟ್ರರೇಟ್!! ಜಿಲ್ಲೆಯಿಂದ ಆಯ್ಕೆಯಾದ ಮೂರು ಮುತ್ತುಗಳಿಗೆ ಜನತೆಯ ಅಭಿನಂದನೆ!!

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಯದಿಂದ ಕೊಡಮಾಡುವ ಗೌರವ ಡಾಕ್ಟರೇಟ್ ಪದವಿಗೆ ಈ ಬಾರಿ ಜಿಲ್ಲೆಯ ಮೂವರು ಆಯ್ಕೆಯಾಗಿದ್ದಾರೆ.

ಶಿಕ್ಷಣ ಹಾಗೂ ಸಮಾಜಸೇವೆಯನ್ನು ಗುರುತಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿ ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆ ಅವರನ್ನು ಆಯ್ಕೆ ಮಾಡಲಾಗಿದೆ.


Ad Widget

Ad Widget

Ad Widget

ಸಿನಿಮಾ, ತುಳು ರಂಗಭೂಮಿಯಲ್ಲಿ ಅಭೂತಪೂರ್ವ ಸಾಧನೆ ಮಾಡಿ, ಹಲವಾರು ನಟರನ್ನು ತುಳು ರಂಗಭೂಮಿಗೆ ಕೊಡುಗೆ ನೀಡಿದ ಹಾಗೂ ಸಾಮಾಜಿಕ, ಸಮಾಜಸೇವೆಗಳಲ್ಲೂ ತನ್ನನ್ನು ತಾನು ತೊಡಗಿಸಿಕೊಂಡಿರುವ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ಹಾಗೂ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಹರಿಕೃಷ್ಣ ಪುನರೂರು ಅವರನ್ನು ಆಯ್ಕೆ ಮಾಡಲಾಗಿದ್ದು, ವಿಶ್ವವಿದ್ಯಾನಿಲಯದ 40ನೇ ಘಟಿಕೋತ್ಸವದಲ್ಲಿ ಪದವಿ ಪ್ರಧಾನವಾಗಲಿದೆ.

Leave a Reply

error: Content is protected !!
Scroll to Top
%d bloggers like this: