ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಪಿಯುಸಿ ಪರೀಕ್ಷೆ ಬರೆಯಲಿರುವ ಆರೋಪಿ ಹುಡುಗ

Share the Article

ಹಳೆ ಹುಬ್ಬಳ್ಳಿಯಲ್ಲಿ ಜರುಗಿದ ಕೋಮು ಗಲಭೆ ಪ್ರಕರಣದ ಹಿನ್ನೆಲೆ ವಿಡಿಯೋ ಪೋಸ್ಟ್ ಮಾಡಿದ್ದ ಆರೋಪಿ ಅಭಿಷೇಕ ಹಿರೇಮಠ್‌ ಪೊಲೀಸ್ ಬಿಗಿ ಭದ್ರತೆಯಲ್ಲಿ ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾನೆ.

ಅಭಿಷೇಕ್‌ ಪರ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟಿದೆ. ಹಿನ್ನೆಲೆ ನಗರದ ಮಹೇಶ್‌ ಪಿಯು ಕಾಲೇಜಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

ಹುಬ್ಬಳ್ಳಿಯ ಕಾರಾಗೃಹದಿಂದ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆ ಬರೆಯಲು ಆಗಮಿಸಲಿದ್ದಾನೆ. ಪರೀಕ್ಷೆ ಬರೆದ ಬಳಿಕ ಮತ್ತೆ ಪೊಲೀಸ್ ಭದ್ರತೆಯಲ್ಲಿ ಜೈಲಿಗೆ ರವಾನಿಸಲಿದ್ದಾರೆ. ಪರೀಕ್ಷೆ ಮುಗಿಯುವವರೆಗೂ ಇದೇ ರೀತಿ ನಡೆದುಕೊಳ್ಳುವಂತೆ ಕೋರ್ಟ್ ಸೂಚನೆ ನೀಡಿದೆ.

Leave A Reply