ಹವಾಮಾನ ಇಲಾಖೆಯಿಂದ ಜನತೆಗೆ ಕಟ್ಟೆಚ್ಚರ ಘೋಷಣೆ
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟಿಸುತ್ತಿದ್ದು ಇನ್ನೂ 2 ದಿನ ವರುಣನ ಅಬ್ಬರವಿರಲಿದೆ. ತಮಿಳುನಾಡು, ತೆಲಂಗಾಣದಲ್ಲಿ ಚಂಡಮಾರುತ ಎದ್ದಿರುವ ಕಾರಣ ಕರ್ನಾಟಕದ ಹಲವು ರಾಜ್ಯಗಳಲ್ಲಿ ಇನ್ನು ಕೆಲವು ದಿನ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡದಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನೂ 2 ದಿನಗಳ ಕಾಲ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದಲ್ಲಿ ಇಂದಿನಿಂದ ಏಪ್ರಿಲ್ 24ರವರೆಗೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಇಂದಿನಿಂದ ಏಪ್ರಿಲ್ 24ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.