ಪೋಲಿಸ್ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವವರಿಗೆ ಇಲ್ಲಿದೆ ಸಿಹಿಸುದ್ದಿ| 2 ಸಾವಿರಕ್ಕೂ ಹೆಚ್ಚು ಪೊಲೀಸ್ ಕಾನ್ಸ್ ಟೇಬಲ್ ಗಳ ನೇಮಕಾತಿಗಾಗಿ ನೋಟಿಫಿಕೇಷನ್

ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ಉದ್ಯೋಗವನ್ನು ಪಡೆಯಲು ಇಚ್ಚಿಸುವವರಿಗೆ ಇಲ್ಲೊಂದು ಸಿಹಿ ಸುದ್ದಿ ಇದ್ದು,ಶೀಘ್ರವೇ 2 ಸಾವಿರಕ್ಕೂ ಹೆಚ್ಚು ಪೊಲೀಸ್ ಕಾನ್ಸ್ ಟೇಬಲ್ ಗಳ ನೇಮಕಾತಿಗಾಗಿ ನೋಟಿಫಿಕೇಷನ್ ಹೊರಡಿಸಲಾಗುತ್ತದೆ ಎಂದು ಡಿಜಿ-ಐಜಿಪಿ ಪ್ರವೀಣ್ ಸೂದ್ ಮಾಹಿತಿ ನೀಡಿದ್ದಾರೆ.

ಕೋರಮಂಗಲದ ಬೆಟಾಲಿಯನ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿದೆ. ಇದನ್ನು ಸರಿದೂಗಿಸಲು ಸದ್ಯದಲ್ಲೇ 2 ಸಾವಿರಕ್ಕೂ ಹೆಚ್ಚು ಕಾನ್ಸ್ ಟೇಬಲ್ ನೇಮಕಾತಿಗೆ ನೋಟಿಫಿಕೇಷನ್ ಕೊಡಲಾಗುತ್ತದೆ ಎಂದು ಹೇಳಿದ್ದಾರೆ.

ಈಗಾಗಲೇ 4,000 ಪೊಲೀಸ್ ಕಾನ್ಸ್ ಟೇಬಲ್ ಪೊಲೀಸ್ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಶೀಘ್ರವೇ ಇನ್ನೂ 2 ಸಾವಿರಕ್ಕೂ ಹೆಚ್ಚು ಕಾನ್ಸ್ ಟೇಬಲ್ ನೇಮಕಾತಿ ನಡೆಯಲಿದೆ ಎಂದು ತಿಳಿಸಿದ್ದಾರೆ.

Leave A Reply

Your email address will not be published.