ವರ್ಗಾವಣೆ ರದ್ದಿಗಾಗಿ ಅಧಿಕಾರಿಗಳ ಮೇಲೆ ಒತ್ತಡ ಹೇರಲು 24 ಮಂದಿ ವಿದ್ಯಾರ್ಥಿನಿಯರನ್ನು ಕೂಡಿಹಾಕಿದ ಶಿಕ್ಷಕರು !!

Share the Article

ಶಿಕ್ಷಕರಿಬ್ಬರು ಶಾಲೆಯ ಮೇಲ್ಛಾವಣಿಯಲಿದ್ದ 24 ಮಂದಿ ವಿದ್ಯಾರ್ಥಿನಿಯರನ್ನು ಬೀಗ ಹಾಕಿ ಕೂಡಿ ಹಾಕಿ ತಮ್ಮ ವರ್ಗಾವಣೆ ಆದೇಶವನ್ನು ರದ್ದುಗೊಳಿಸುವಂತೆ ಜಿಲ್ಲಾ ಅಧಿಕಾರಿಗಳಿಗೆ ಒತ್ತಡ ಹೇರಿದ ಘಟನೆ ಲಕ್ನೋ ದ ಲಖೀಂಪುರ ಖೇರಿ ಜಿಲ್ಲೆಯ ಬೆಹ್ಜಾಮ್‍ನಲ್ಲಿರುವ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ ನಡೆದಿದೆ.

ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಹಲವಾರು ಗಂಟೆಗಳ ಬಳಿಕ ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ವಿದ್ಯಾರ್ಥಿನಿಯರನ್ನು ರಕ್ಷಿಸಿ ಹಾಸ್ಟೆಲ್‍ಗೆ ಕಳುಹಿಸಿದ್ದಾರೆ. ಕಸ್ತೂರ್ಬಾ ಗಾಂಧಿ ಬಾಲಿಕಾ ವಿದ್ಯಾಲಯವು ನೀಡಿದ್ದ ವರ್ಗಾವಣೆ ಆದೇಶವನ್ನು ರದ್ದುಗೊಳಿಸುವಂತೆ ಜಿಲ್ಲಾ ಅಧಿಕಾರಿಗಳ ಮೇಲೆ ಒತ್ತಡ ಹೇರಲು ಶಿಕ್ಷಕರು ಇಂತಹ ಕೆಲಸವನ್ನು ಮಾಡಿದ್ದಾರೆ ಎಂದು ಲಖೀಂಪುರ ಖೇರಿಯ ಮೂಲ ಶಿಕ್ಷಣಾಧಿಕಾರಿ ಲಕ್ಷ್ಮೀಕಾಂತ್ ಪಾಂಡೆ ತಿಳಿಸಿದ್ದಾರೆ.

ಶಾಲೆಗೆ ವಾರ್ಡನ್ ಗಳು ಬಂದು ಪರೀಕ್ಷಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿದ ನಂತರ ವಿದ್ಯಾರ್ಥಿನಿಯರನ್ನು ಹೊರಬಿಡಲಾಯಿತು ಎಂದು ತಿಳಿದುಬಂದಿದೆ.

Leave A Reply