ಮಂಗಳೂರು : ಲಕ್ಷಗಟ್ಟಲೆ ಬೆಲೆಬಾಳುವ ಚಿನ್ನ ಪತ್ತೆ ; ಕಸ್ಟಮ್ಸ್ ಅಧಿಕಾರಿಗಳಿಂದ ಕ್ಷಿಪ್ರ ಕಾರ್ಯಾಚರಣೆ!

ಮಂಗಳೂರು: ಭಾರೀ ಮೊತ್ತದ ಚಿನ್ನವನ್ನು ದುಬೈನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ನಿನ್ನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.

 

ದುಬೈನಿಂದ ಬಂದ ಪ್ರಯಾಣಿಕರನ್ನು ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ 24 ಕ್ಯಾರೆಟ್‌ನ ಸುಮಾರು 10,25,066 ಲಕ್ಷ ರೂ ಮೌಲ್ಯದ ಚಿನ್ನವನ್ನು ಮಹಿಳೆಯರ ಹ್ಯಾಂಡ್ ಬ್ಯಾಗ್ ಒಳಗೆ ಮರೆಮಾಚಿ ಸಾಗಾಟ ಮಾಡಲಾಗುತ್ತಿತ್ತು.

ತಪಾಸಣೆ ವೇಳೆ ಕಸ್ಟಮ್ಸ್ ಅಧಿಕಾರಿಗಳು ಇದನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.

Leave A Reply

Your email address will not be published.