ದ್ವಿತೀಯ ಪಿಯುಸಿ ಪರೀಕ್ಷೆಗೆ ಭಯಪಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!

Share the Article

ಮೈಸೂರು:ದ್ವಿತೀಯ ಪಿಯುಸಿ ಪರೀಕ್ಷೆಗೆ ಭಯಪಟ್ಟು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್.ಡಿ.ಕೋಟೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ತಾಲೂಕಿನ ಹನುಮಂತ ನಗರದ ರಾಮು ಅವರ ಪುತ್ರಿ ಅನು(18) ಎಂದು ಗುರುತಿಸಲಾಗಿದೆ.

ನಗರದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಈಕೆ,ಓದಿನಲ್ಲೂ ಸಹ ಮುಂದಿದ್ದರು ಎನ್ನಲಾಗಿದೆ. ಎಂದಿನಂತೆ ಗುರುವಾರ ಬೆಳಿಗ್ಗೆ ಪರೀಕ್ಷೆ ಇದೆ ಓದಿಕೊಳ್ಳಬೇಕು ಎಂದು ತಂದೆಗೆ ಹೇಳಿ ರೂಂಗೆ ತೆರಳಿದ್ದು, ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.

ಈ ವಿಷಯ ತಿಳಿದು ತಂದೆ ತಾಯಿ ಆಕೆಯನ್ನು ರಕ್ಷಿಸಲು ಮುಂದಾದರೂ ಅಷ್ಟರಲ್ಲಾಗಲೇ ಆಕೆ ಸಾವನ್ನಪ್ಪಿದ್ದಾಳೆ.ಆಕೆಯ ಸಾವಿನ ವಿಚಾರ ತಿಳಿದು ವಿದ್ಯಾರ್ಥಿಗಳು, ಸ್ಥಳೀಯರು ದುಃಖ ವ್ಯಕ್ತಪಡಿಸಿದ್ದಾರೆ.

Leave A Reply